ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ: ED ವಿಚಾರಣೆಗೆ ಹಾಜರಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ

0
Spread the love

ಅಕ್ರಮ ಬೆಟ್ಟಿಂಗ್ ವೇದಿಕೆಗಳ ಕುರಿತು ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರನ್ನು ದೆಹಲಿಯ ಕಚೇರಿಗೆ ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ (ED) ಸಮನ್ಸ್ ಜಾರಿ ಮಾಡಿತ್ತು. ಇದೀಗ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

ಆನ್ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮಾಜಿ ಕ್ರಿಕೆಟಿಗ ಸುರೇಶ್ ರೈನಾಗೆ ನೋಟಿಸ್ ನೀಡಿ, ಬುಧವಾರ (.13) ವಿಚಾರಣೆ ಹಾಜರಾಗುವಂತೆ ತಿಳಿಸಿತ್ತು.

ಅದರಂತೆ ದೆಹಲಿಯಲ್ಲಿರುವ ಇಡಿ ಕಚೇರಿಗೆ ಆಗಮಿಸಿ, ವಿಚಾರಣೆಗೆ ಹಾಜರಾಗಿದ್ದಾರೆ. ಇಡಿ ವಿಚಾರಣೆ ವೇಳೆ ರೈನಾ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ ನಟ ಪ್ರಕಾಶ್ ರೈ, ವಿಜಯ ದೇವರಕೊಂಡ, ರಾಣಾ ದಗ್ಗುಬಾಟಿ ಸೇರಿದಂತೆ ಹಲವರನ್ನು ಇಡಿ ವಿಚಾರಣೆ ನಡೆಸಿದೆ.


Spread the love

LEAVE A REPLY

Please enter your comment!
Please enter your name here