ಬೆಂಗಳೂರು :- ರಾಜ್ಯ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ.
Advertisement
ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ನೋಟಿಸ್ ಜಾರಿ ಆಗಿದ್ದು, ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ನಗರದಲ್ಲಿರುವ ತಮ್ಮ ಮನೆಗೆ ಬಂದು ಲೋಕಾಯುಕ್ತ ಇನ್‌ಪೆಕ್ಟರ್ ನೀಡಿದ್ದ ನೋಟಿಸ್ ಅನ್ನು ಸಚಿವ ಜಮೀರ್ ಸ್ವೀಕರಿಸಿದ್ದು, ಸೂಕ್ತ ದಾಖಲೆಗಳೊಂದಿಗೆ ಖುದ್ದು ಹಾಜರಾಗುವಂತೆ ಸಚಿವರಿಗೆ ಪೊಲೀಸರು ಸೂಚಿಸಿದ್ದಾರೆ.
ಮೂರು ವರ್ಷಗಳ ಹಿಂದೆ ಜಮೀರ್ ವಿರುದ್ಧ ಎಸಿಬಿಯಲ್ಲಿ ಜಾರಿ ಇ.ಡಿ. ವರದಿ ಆಧರಿಸಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ದಾಖಲಾಗಿತ್ತು.
ತರುವಾಯ ಎಸಿಬಿ ರದ್ದುಗೊಂಡ ನಂತರ ಆ ಪ್ರಕರಣದ ಮುಂದುವರೆದ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಕೈಗೆತ್ತಿಕೊಂಡಿದ್ದರು. ಪ್ರಾಥಮಿಕ ಹಂತದ ತನಿಖೆ ಮುಗಿಸಿದ ಪೊಲೀಸರು, ಈಗ ಅಕ್ರಮ ಆಸ್ತಿ ಸಂಪಾದನೆ ಸಂಬಂಧ ವಿಚಾರಣೆಗೆ ಹಾಜರಾಗಲು ಸಚಿವರಿಗೆ ಸೂಚಿಸಲಾಗಿದೆ.