BREAKING: ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಹೈಕೋರ್ಟ್‌ʼನಿಂದ ಡಿಕೆ ಶಿವಕುಮಾರ್ʼಗೆ ಬಿಗ್ ರಿಲೀಫ್!

0
Spread the love

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್​ಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅಕ್ರಮ ಆಸ್ತಿ ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ.

Advertisement

ಹೈಕೋರ್ಟ್ ವಿಭಾಗೀಯ ಪೀಠದ ನ್ಯಾ.ಕೆ ಸೋಮಶೇಖರ್ & ನ್ಯಾ. ಉಮೇಶ್ ಅವರ ಪೀಠ ಇಂದು ಸಿಬಿಐ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ ನೀಡಿದೆ. ಹೈಕೋರ್ಟ್ ಆದೇಶದಿಂದ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಸಿಬಿಐ & ಯತ್ನಾಳ ಅರ್ಜಿಗಳನ್ನು ವಜಾ ಮಾಡಿದ ಹೈಕೋರ್ಟ್ ಅರ್ಜಿದಾರರು ಅಗತ್ಯವಿದ್ದರೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ. ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರಿಂಕೋರ್ಟ್‌ಗೆ ಹೋಗಲಿದೆ. ಸಿಬಿಐ ಸುಪ್ರಿಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ತನಕ ಡಿಸಿಎಂ ಡಿಕೆ ಶಿವಕುಮಾರ್‌ ಬಿಗ್ ರಿಲೀಫ್ ಸಿಕ್ಕಿದೆ.

 


Spread the love

LEAVE A REPLY

Please enter your comment!
Please enter your name here