ಬೆಂಗಳೂರು ಗ್ರಾಮಾಂತರ:- ಅಕ್ರಮವಾಗಿ ರಕ್ತ ಚಂದನ ಕಳ್ಳಸಾಗಣೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಹೊಸಕೋಟೆ ಪೋಲೀಸರು ಅರೆಸ್ಟ್ ಮಾಡಿದ್ದಾರೆ.
ಏಜಾಜ್ ಷರೀಪ್(47), ಪಯಾಜ್ ಷರೀಪ್( 47) ಮತ್ತು ಸಾಧಿಕ್ ಖಾನ್ ಬಂಧಿತರು. ಆರೋಪಿಗಳು, ಆಂಧ್ರಪ್ರದೇಶ ಮತ್ತು ತಮಿಳು ನಾಡಿನಿಂದ ಅಕ್ರಮವಾಗಿ ರಕ್ತಚಂದನ ಮರದ ತುಂಡುಗಳನ್ನು ತರಿಸಿಕೊಂಡು ಡೆಲಿವರಿ ಟ್ರಾನ್ಸ್ ಫೋರ್ಟ್ ಮಾಡಲು ಮುಂದಾಗಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು, ಆರೋಪಿಗಳನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿ ಆಗಿದ್ದಾರೆ.
ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ, ಟೇಪ್ ಸುತ್ತಿ ಹೊಸಕೋಟೆಯ ಕೊಳತ್ತೂರು ಗ್ರಾಮದ ಡೆಲಿವರಿ ಟ್ರಾನ್ಸ್ ಪೋರ್ಟ್ ಕಂಪನಿ ಮೂಲಕ ಡೆಲಿವರಿ ಮಾಡಲು ಪ್ಲಾನ್ ಮಾಡಿದ್ದರು. ಆರೋಪಿಗಳ ಖಚಿತ ಮಾಹಿತಿ ಪಡೆದು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳಿಂದ 25 ಲಕ್ಷ ಬೆಲೆ ಬಾಳುವ 1093 ಕೆಜಿ ತೂಕದ 102 ರಕ್ತ ಚಂದನ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಹೊಸಕೋಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.