ಮಂಗಳೂರು:- ಅಕ್ರಮವಾಗಿ ಮಂಗಳೂರಿನಲ್ಲಿ ನೆಲೆಯೂರಿದ್ದ ಬಾಂಗ್ಲಾ ಪ್ರಜೆಯನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ.
Advertisement
25 ವರ್ಷದ ಅನರುಲ್ ಶೇಖ್ ಬಂಧಿತ ಆರೋಪಿ. ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ ಅಂತಾರಾಷ್ಟ್ರಿಯ ಗಡಿರೇಖೆ ಲಾಲ್ಗೋಲ್ ಮೂಲಕ ಅಕ್ರಮವಾಗಿ ಭಾರತದೊಳಗೆ ಪ್ರವೇಶಿಸಿದ್ದನು. ಬಳಿಕ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಿಂದ ಉಡುಪಿಗೆ ಬಂದಿದ್ದನು. ಇಲ್ಲಿಂದ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಕ್ಕ ಗ್ರಾಮದ ರೋಹನ್ ಎಸ್ಟೇಟ್ನಲ್ಲಿ ಅನರುಲ್ ಶೇಖ್ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು.
ಅನರುಲ್ ಶೇಖ್ ಬಗ್ಗೆ ಖಚಿತ ಮಾಹಿತಿ ಪಡೆದ ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ, ವಿದೇಶಿ ಪ್ರಜೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.