ಬೆಂಗಳೂರು:- ಕಾಡುಗೋಡಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಪ್ರಜೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Advertisement
55 ವರ್ಷದ ಮೊಹಮ್ಮದ್ ಸಿದ್ಧಿಕ್ ಬಂಧಿತ ಆರೋಪಿ. ಮೊಹಮ್ಮದ್ ಸಿದ್ಧಿಕ್ 2006ರಲ್ಲಿ ಅಕ್ರಮವಾಗಿ ಭಾರತಕ್ಕೆ ಬಂದಿದ್ದನು. ಪಶ್ಚಿಮ ಬಂಗಾಳದ ಮೆಲ್ಪಾ ಜಿಲ್ಲೆಯ ಶಾಲೆಯೊಂದರಲ್ಲಿ ನಕಲಿ ವರ್ಗಾವಣೆ ಪ್ರಮಾಣ ಪತ್ರ ಪಡೆದಿದ್ದನು.
ಬಳಿಕ, ಮೊಹಮ್ಮದ್ ಸಿದ್ಧಿಕ್ ಬೆಂಗಳೂರಿನ ಕಾಡುಗೋಡಿಯ ದೊಡ್ಡಬನಹಳ್ಳಿ ಬಳಿ ವಾಸವಿದ್ದನು. ಇಲ್ಲಿ, ನಕಲಿ ವರ್ಗಾವಣೆ ಪತ್ರದ ಮೂಲಕ ಭಾರತದ ಪಾಸ್ಪೋರ್ಟ್, ವೋಟರ್ಐಡಿ, ಪಾನ್ ಕಾರ್ಡ್ ಪಡೆದಿದ್ದಾಗಿ ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ. ಮೊಹಮ್ಮದ್ ಸಿದ್ಧಿಕ್ ವಿರುದ್ಧ ಕಾಡುಗೋಡಿ ಠಾಣೆಯಲ್ಲಿ ಫಾರಿನರ್ಸ್ ಆಕ್ಟ್, BNS 336(3), 340(2), 339ರಡಿಯಲ್ಲಿ ಪ್ರಕರಣ ದಾಖಲಾಗಿದೆ.