ಹಾಸನ: ಹೊರ ರಾಜ್ಯದಿಂದ ಅಕ್ರಮವಾಗಿ ಗಾಂಜಾ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳನ್ನು ಕೊಣನೂರು ಪೊಲೀಸರು ಬಂಧಿಸಿದ್ದಾರೆ. ಒರಿಸ್ಸಾ ಮೂಲದ ಸಮೀರ್ ಪ್ರಧಾನ್ (47), ಗೀತಾ ಪ್ರಧಾನ್ (25) ಬಂಧಿತ ಆರೋಪಿಗಳಾಗಿದ್ದು,
Advertisement
ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕಿನ, ಕೇರಳಾಪುರ ಗಡಿಭಾಗದಲ್ಲಿ 10 ಕೆಜಿ ಗಾಂಜಾ ಸೊಪ್ಪು ತಂದು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.