ಬೆಳಗಾವಿ: ಮೀನು ಸಾಗಣೆ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಗೋವಾ ಮದ್ಯವನ್ನು ಬೆಳಗಾವಿ ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮೀನಿನ ಕೋಲ್ಡ್ ಸ್ಟೋರೇಜ್‌ನಲ್ಲಿ ಬಚ್ಚಿಡಲಾಗಿದ್ದ 350 ಬಾಕ್ಸ್ ಲಿಕ್ಕರ್ ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ 35.28 ಲಕ್ಷ ರೂಪಾಯಿ ಎಂದು ತಿಳಿದುಬಂದಿದೆ.
ಬೆಳಗಾವಿ ಅಬಕಾರಿ ಅಪರ ಆಯುಕ್ತ ವೈ. ಮಂಜುನಾಥ ಅವರ ಮಾರ್ಗದರ್ಶನದಲ್ಲಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯದ ಜೊತೆಗೆ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ವಾಹನವನ್ನು ಕೂಡ ಜಪ್ತಿ ಮಾಡಲಾಗಿದೆ.
ಅಬಕಾರಿ ಅಧಿಕಾರಿಗಳ ಕಣ್ತಪ್ಪಿಸಲು ಹೊಸ ತಂತ್ರ
ಅಬಕಾರಿ ಅಧಿಕಾರಿಗಳ ಕಣ್ತಪ್ಪಿಸಲು ಆರೋಪಿಗಳು ಗೋವಾದಿಂದ ನೇರವಾಗಿ ಬೆಳಗಾವಿಗೆ ಬರುವ ಬದಲು, ಮಹಾರಾಷ್ಟ್ರದ ಮೂಲಕ ಸಂಚರಿಸುತ್ತಿದ್ದರು ಎನ್ನಲಾಗಿದೆ. ಗೋವಾದಿಂದ ಮಹಾರಾಷ್ಟ್ರಕ್ಕೆ ತೆರಳಿ, ಅಲ್ಲಿಂದ ಬೆಳಗಾವಿ ಮಾರ್ಗವಾಗಿ ಮಂಗಳೂರಿಗೆ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಮೀನು ಸಾಗಣೆ ವಾಹನದ ಕೋಲ್ಡ್ ಸ್ಟೋರೇಜ್‌ನಲ್ಲಿ ಮದ್ಯದ ಬಾಕ್ಸ್‌ಗಳನ್ನು ಬಚ್ಚಿಟ್ಟು ಸಾಗಿಸುತ್ತಿದ್ದ ಪ್ರಕರಣವನ್ನು ಅಬಕಾರಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಈ ಅಕ್ರಮ ಮದ್ಯ ಸಾಗಾಟದ ಹಿಂದೆ ಯಾರಿದ್ದಾರೆ ಮತ್ತು ಮದ್ಯವನ್ನು ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬ ಬಗ್ಗೆ ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದುಬರಬೇಕಿದೆ.









