ರೋಣ: ಶನಿವಾರ ರೋಣ ಪಟ್ಟಣದ ಹೊಳೆಆಲೂರ ರಸ್ತೆಯಲ್ಲಿ ಟಾಟಾ ಏಸ್ ವಾಹನದಲ್ಲಿ ಆಕ್ರಮವಾಗಿ ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ಜೋಳವನ್ನು ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆಯ ಸಿಬ್ಬಂದಿಗಳು ಮತ್ತು ಪೊಲೀಸರು ದಾಳಿ ಮಾಡಿ 33 ಸಾವಿರ ರೂ ಮೌಲ್ಯದ 10 ಕ್ವಿಂಟಲ್ ಅಕ್ಕಿ, 2 ಸಾವಿರ ಮೌಲ್ಯದ ಜೋಳವನ್ನು ವಾಹನದೊಂದಿಗೆ ವಶಪಡಿಸಿಕೊಂಡಿದ್ದು, ಚಾಲಕನನ್ನು ಬಂಧಿಸಲಾಗಿದೆ. ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



