ಚಿತ್ರದುರ್ಗ:- ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ, ಮಾಲು ಸಮೇತ ಲಾರಿ ಸೀಜ್ ಮಾಡಿದ್ದಾರೆ.
ಚಿತ್ರದುರ್ಗ ಜಿಲ್ಲಾ ಉಪವಿಭಾಗಾಧಿಕಾರಿ ಎಸಿ ಮೆಹೆಬೂಬ್ ಜಿಲಾನಿ ನೇತೃತ್ವದ ತಂಡದಿಂದ ಈ ದಾಳಿ ನಡೆದಿದೆ. ಸುಮಾರು 300ಕ್ಕೂ ಹೆಚ್ಚು ಚೀಲ ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ಅಧಿಕಾರಿಗಳು 30ಟನ್‌ಗೂ ಅಧಿಕ ಅನ್ನಭಾಗ್ಯ ಅಕ್ಕಿ ಹಾಗೂ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಅಕ್ಕಿಮತ್ತು ಲಾರಿಯನ್ನು ಚಿತ್ರದುರ್ಗ ನಗರ ಠಾಣೆ ಪೊಲೀಸರಿಗೆ ಒಪ್ಪಿಸಲಾಗಿದೆ. ಅಧಿಕಾರಿಗಳಿಂದ ತನಿಖೆ ಮುಂದುವರಿದಿದೆ.



