ಬೆಂಗಳೂರು: ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಹಿನ್ನಲೆ ಯುವಕನನ್ನು ಕೊಲೆ ಮಾಡಿರುವ ಘಟನೆ ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ನಡೆದಿದೆ. ನರಸಿಂಹರಾಜು (32) ಕೊಲೆಯಾದ ಯುವಕನಾಗಿದ್ದು, ನರಸಿಂಹರಾಜುಗೆ ಬೇರೆ ಮದುವೆ ಯಾಗಿದ್ದ ಮಹಿಳೆಯ ಜೊತೆ ಅಕ್ರಮ ಸಂಬಂಧವಿತ್ತು.
ಆ ಮಹಿಳೆಯೂ ಆಗಾಗ್ಗ ನರಸಿಂಹರಾಜು ಮನೆಗೆ ಬರ್ತಾ ಇದ್ದರು. ಶನಿವಾರ ಆ ಮಹಿಳೆ ನರಸಿಂಹರಾಜು ಮನೆ ಇದ್ದರು. ಇದನ್ನು ತಿಳಿದ ಮಹಿಳೆಯ ಮನೆಯವರು ಬಂದಿದ್ದಾರೆ. ಬಳಿಕ ಮನೆಯಲ್ಲಿದ್ದ ನರಸಿಂಹರಾಜುನನ್ನು ಮನೆಯಿಂದ ಹೊರಗಡೆ ಎಳೆದುಕೊಂಡು ಬಂದು ರಸ್ತೆಯಲ್ಲಿ ನಾಲ್ಕೈದು ಜನ ಮನಸ್ಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ.
ಈ ವೇಳೆ ಬಿಡಿಸಲು ಬಂದ ನರಸಿಂಹರಾಜು ತಾಯಿಯ ಮೇಲೂ ಹಲ್ಲೆ ಮಾಡಲಾಗಿದೆ. ಹಲ್ಲೆಯಿಂದ ಅಸ್ವಸ್ಥನಾಗಿದ್ದ ನರಸಿಂಹರಾಜುನನ್ನು ಕೂಡಲೇ ಕೆ.ಸಿ ಜನರಲ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆಯಲ್ಲಿ ಯುವಕ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ ಎಂದು ಕುಟುಂಬಸ್ಥರ ಆಕ್ರೋಶ ಹೊರಹಾಕಿದ್ದಾರೆ.



