ಬೆಂಗಳೂರು: ಕರ್ನಾಟಕದ ಮಲೆನಾಡು ಭಾಗ ಮತ್ತು ಕೇರಳದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದಾಗಿ ನದಿಗಳು ಉಕ್ಕೇರಿ ಹರಿಯುತ್ತಿವೆ. ಜಲಾಶಯಗಳಿಗೆ ಭಾರಿ ಪ್ರಮಾಣದ ಹರಿದುಬರುತ್ತಿದೆ. ನಿರಂತರ ಮಳೆಯಿಂದಾಗಿ ಶಿರಾಡಿ, ಚಿಕ್ಕಮಗಳೂರು, ಚಾರ್ಮಾಡಿ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ ಸೇರಿ ವಿವಿಧೆಡೆ 10ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿತ ಸಂಭವಿಸಿದೆ.
ಇನ್ನೂ ಇನ್ನೂ ರಾಜ್ಯದಲ್ಲಿ ಆಗಸ್ಟ್ 6ರವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಕೂಡ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗಲಿದೆ. ಎಚ್ಎಎಲ್ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.