ಅನೈತಿಕ ಸಂಬಂಧಕ್ಕೆ ಅಡ್ಡಿ: ಹೆತ್ತ ಮಗುವನ್ನೇ ಕೊಲೆಗೈದ ಪಾಪಿ ತಾಯಿ

0
Spread the love

ಹಾವೇರಿ:– ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಗುಡ್ಡದ ಆನ್ವೇರಿ ಗ್ರಾಮದಲ್ಲಿ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾಳೆಂದು ಪ್ರಿಯಕರನೊಂದಿಗೆ ಸೇರಿ ಹೆತ್ತ ಮಗುವನ್ನೇ ಉಸಿರುಗಟ್ಟಿಸಿ ತಾಯಿ ಕೊಲೆ ಮಾಡಿರುವ ಘಟನೆ ಜರುಗಿದೆ.

Advertisement

4 ವರ್ಷದ ಪ್ರಿಯಾಂಕಾ ಮೃತ ಮಗು. ಗಂಗಮ್ಮ ಗುತ್ತಲ (36) ಹಾಗೂ ಅಣ್ಣಪ್ಪ ಮಡಿವಾಳರ (40) ಕೊಲೆ ಮಾಡಿದ ಆರೋಪಿಗಳು. ಆರೋಪಿಗಳಿಬ್ಬರು ಅನೈತಿಕ ಸಂಬಂಧ ಹೊಂದಿದ್ದರು. ಹೀಗಾಗಿ ಆರೋಪಿ ಗಂಗಮ್ಮ ಎರಡು ತಿಂಗಳ ಹಿಂದೆ ತನ್ನ ಪತಿಯನ್ನು ಬಿಟ್ಟು, ಮಗಳನ್ನು ಕರೆದುಕೊಂಡು ಅಣ್ಣಪ್ಪನ ಜೊತೆ ಗುಡ್ಡದ ಆನ್ವೇರಿ ಗ್ರಾಮದಲ್ಲಿ ವಾಸವಾಗಿದ್ದರು. ಆದರೆ ಈ ನಡುವೆ ತಮ್ಮ ಅಕ್ರಮ ಸಂಬಂಧಕ್ಕೆ ಮಗಳು ಅಡ್ಡಿಯಾಗುತ್ತಿದ್ದಾಳೆಂದು ಭಾವಿಸಿ, ಆಕೆಯ ಕೊಲೆಗೆ ಸಂಚು ರೂಪಿಸಿದ್ದರು. ಅದರಂತೆ ಆ.5ರಂದು ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಹಾವೇರಿ ತಾಲೂಕಿನ ಕುರಗುಂದ ಗ್ರಾಮದ ತುಂಗಾ ಮೇಲ್ದಂಡೆ ಯೋಜನೆಯ ಕಾಲುವೆ ಬಳಿ ಸುಟ್ಟು ಹಾಕಲು ಪ್ರಯತ್ನಿಸಿದ್ದರು.

ಇದೆಲ್ಲ ನಡೆದ ಸ್ವಲ್ಪ ದಿನಗಳ ಬಳಿಕ ಆರೋಪಿ ಗಂಗಮ್ಮಳ ಪತಿ ಮಂಜುನಾಥ ಮಗುವನ್ನು ನೀಡುವಂತೆ ಬೇಡಿಕೊಂಡಿದ್ದನು. ಆಗ ಗಂಗಮ್ಮ ಮಗಳು ಅಲ್ಲಿದ್ದಾಳೆ, ಇಲ್ಲಿದ್ದಾಳೆ ಎಂದು ಕಥೆ ಕಟ್ಟಿದ್ದಳು. ಇದರಿಂದ ಬೇಸತ್ತ ಪತಿ ಮಂಜುನಾಥ ಮಗಳನ್ನು ಕೊಡಿಸುವಂತೆ ಶಹರ ಠಾಣೆ ಪಿಎಸ್‌ಐ ಗಡ್ಡಪ್ಪ ಗುಂಜುಟಗಿ ಅವರ ಮೊರೆ ಹೋಗಿದ್ದಾನೆ. ಆಗ ಪಿಎಸ್‌ಐ ಮಗಳ ವಿಚಾರವಾದರೆ ಕೂಡಲೇ ಬಗೆಹರಿಸುವೆ ಎಂದು ಗಂಗಮ್ಮ ಮತ್ತು ಅಣ್ಣಪ್ಪನನ್ನು ಕರೆತಂದು ವಿಚಾರಿಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here