ಆ.1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿ: ಸರ್ಕಾರಿ ನೌಕರರಿಗೆ CM ಗುಡ್​ನ್ಯೂಸ್!

0
Spread the love

ಬೆಂಗಳೂರು: ರಾಜ್ಯ ಸರ್ಕಾರ ನೌಕರರು ಕಾತುರದಿಂದ ನಿರೀಕ್ಷಿಸುತ್ತಿದ್ದ 7ನೇ ವೇತನ ಆಯೋಗದ ವರದಿ ಶಿಫಾರಸುಗಳ ಅನುಷ್ಠಾನ ಆಗಸ್ಟ್ 1ರಿಂದಲೇ ಜಾರಿಗೆ ಬರಲಿದೆ. ಇಂದು ನಡೆದ ಸಚಿವ ಸಂಪುಟದಲ್ಲಿ ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ.

Advertisement

ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ (CS Shadakshari) ಅವರು ರಾಜ್ಯ ಸರ್ಕಾರಕ್ಕೆ ಈಗಾಗಲೇ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದ್ದು, ಇದರಿಂದ ರಾಜ್ಯದ ಲಕ್ಷಾಂತರ ನೌಕರರ ವೇತನ ಶೇ 27.5 ರಷ್ಟು ಜಾಸ್ತಿಯಾಗಲಿದೆ.

ಶೇ 27.5 ವೇತನ ಪರಿಷ್ಕರಣೆ ಮಾಡಿದ ವರದಿಯನ್ನು ಮಾರ್ಚ್‌ 16 ರಂದು ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ  ಸಿಎಂ ಸಿದ್ದರಾಮಯ್ಯನವರಿಗೆ ನೀಡಿತ್ತು.  ಬಳಿಕ ಸಿಎಂ, ಇದನ್ನು ಜಾರಿ ತರುವ ಬಗ್ಗೆ ಹಣಕಾಸು ಇಲಾಖೆಯ ಮಾಹಿತಿ ಕೇಳಿದ್ದ‌ರು. ಇದೀಗ ಹಣಕಾಸು ಇಲಾಖೆ ವರದಿ ಬಳಿಕ ಸಿದ್ದರಾಮಯ್ಯ ಅವರು ಆಗಸ್ಟ್ 1 ರಿಂದ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನ ಪ್ರಕಟಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here