HomeGadag Newsಒನ್ ಸೈಡ್ ಪಾರ್ಕಿಂಗ್ ವ್ಯವಸ್ಥೆ ಜಾರಿ

ಒನ್ ಸೈಡ್ ಪಾರ್ಕಿಂಗ್ ವ್ಯವಸ್ಥೆ ಜಾರಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ಪಟ್ಟಣವು ಇಕ್ಕಟ್ಟಾದ ರಸ್ತೆಯನ್ನು ಹೊಂದಿದ್ದು, ಸಾರ್ವಜನಿಕರ ಮುಕ್ತ ಸಂಚಾರಕ್ಕೆ ಅವಕಾಶವನ್ನು ಕಲ್ಪಿಸುವುದಕ್ಕಾಗಿ ಒನ್‌ಸೈಡ್ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಇದಕ್ಕೆ ಸಹಕಾರ ನೀಡಬೇಕೆಂದು ಶಿರಹಟ್ಟಿ ಪಿಎಸ್‌ಐ ಚನ್ನಯ್ಯ ದೇವೂರ ಹೇಳಿದರು.

ಅವರು ಮಂಗಳವಾರ ಶಿರಹಟ್ಟಿಯಲ್ಲಿ ಒನ್‌ಸೈಡ್ ಪಾರ್ಕಿಂಗ್ ಜಾರಿಗೊಳಿಸಿ ಇಲಾಖೆ ವತಿಯಿಂದ ಬೋರ್ಡ್ಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಈ ಬಗ್ಗೆ ಜಾಗೃತಿ ಮೂಡಿಸಿ ಮಾತನಾಡಿದರು.

ಪ್ರಮುಖವಾಗಿ ನೆಹರು ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ನಿತ್ಯವೂ ನೂರಾರು ಬೈಕ್ ಸವಾರರು ಸಂಚರಿಸುತ್ತಾರೆ. ಇದೇ ರಸ್ತೆಯಲ್ಲಿ ಪ್ರಮುಖ ಮಾರುಕಟ್ಟೆ ಸಹ ಬರುವದರಿಂದ ಸಂಚಾರಕ್ಕೆ ಇಲ್ಲಿ ವ್ಯತ್ಯಯವಾಗುತ್ತಿತ್ತು. ಇದನ್ನು ಸರಿಪಡಿಸುವುದಕ್ಕೆ ಸಮ-ಬೆಸ ರೀತಿಯಲ್ಲಿ ನಿತ್ಯವೂ ಒಂದೊಂದು ಬದಿ ವಾಹನ ನಿಲುಗಡೆಗೆ ವ್ಯವಸ್ಥೆಯನ್ನು ಮಾಡಿದ್ದು, ಮುಂದಿನ ದಿನಗಳಲ್ಲಿ ಪಟ್ಟಣದಾದ್ಯಂತ ಜನಸಂದಣಿ ಹೆಚ್ಚಿಗೆ ಇರುವ ಪ್ರದೇಶಗಳಲ್ಲೂ ಸಹ ಸೂಕ್ತ ಪಾರ್ಕಿಂಗ್ ವ್ಯವಸ್ಥೆಗೆ ಇಲಾಖೆ ವತಿಯಿಂದ ಕ್ರಮ ವಹಿಸಲಾಗವುದು. ಸಾರ್ವಜನಿಕರು ಸಂಚಾರಿ ನಿಯಮಗಳನ್ನು ಪಾಲಿಸಬೇಕೆಂದು ಹೇಳಿದರು.

ಎಎಸ್‌ಐ ಬಾರಿಗಿಡದ, ಸಿಬ್ಬಂದಿ ಲೋಕೇಶ ಲಮಾಣಿ ಉಪಸ್ಥಿತರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!