New Virus: ಚೀನಾದ ನಿಗೂಢ ವೈರಸ್ ಕುರಿತು ಆರೋಗ್ಯ ಸಂಸ್ಥೆಯಿಂದ ಮಹತ್ವದ ಮಾಹಿತಿ!

0
Spread the love

ನವದೆಹಲಿ: ಐದು ವರ್ಷಗಳ ನಂತರ ಮತ್ತೊಂದು ವೈರಸ್ ಚೀನಾದಲ್ಲಿ ಕಂಡು ಬಂದಿದೆ. ಹ್ಯೂಮನ್ ಮೆಟಾಪ್ನ್ಯುಮೋವೈರಸ್ (ಎಚ್ಎಂಪಿವಿ) ದೇಶದಲ್ಲಿ ಹರಡುತ್ತಿದ್ದು, ಆತಂಕ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಈ ವೈರಸ್‌ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ಉಸಿರಾಟದ ಸೋಂಕುಗಳ ವಿರುದ್ಧ ಸಾಮಾನ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ ಸಾಕು ಎಂದು ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯದ ಅಧಿಕಾರಿ ಡಾ ಅತುಲ್ ಗೋಯೆಲ್ ಹೇಳಿದ್ದಾರೆ.

Advertisement

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ದೇಶದಲ್ಲಿ ಉಸಿರಾಟಕ್ಕೆ ಸಂಬಂಧಿಸಿದಂತೆ ದಾಖಲಾದ ರೋಗಿಗಳ ಡೇಟಾವನ್ನು ವಿಶ್ಲೇಷಿಸಿದ್ದೇವೆ. ಡಿಸೆಂಬರ್ 2024ರ ಡೇಟಾದಲ್ಲಿ ಯಾವುದೇ ಗಣನೀಯ ಹೆಚ್ಚಳ ಕಂಡುಬಂದಿಲ್ಲ. ನಮ್ಮ ಯಾವುದೇ ಸಂಸ್ಥೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕೇಸ್‌ ದಾಖಲಾದ ಬಗ್ಗೆ ವರದಿಯಾಗಿಲ್ಲ ಎಂದು ಹೇಳಿದರು.

HMPVಗೆ ಯಾವುದೇ ನಿರ್ದಿಷ್ಟ ಆಂಟಿವೈರಲ್ ಚಿಕಿತ್ಸೆ ಇಲ್ಲ, ಆದ್ದರಿಂದ ಅದರ ಹರಡುವಿಕೆಯನ್ನು ನಿಯಂತ್ರಿಸಲು ತಡೆಗಟ್ಟುವಿಕೆ ಮುಖ್ಯವಾಗಿದೆ. ಚೀನಾದಲ್ಲಿ HMPV ಏಕಾಏಕಿ ಹರಡಿರುವ ಬಗ್ಗೆ ಸುದ್ದಿಗಳಿವೆ. ಇದು ಯಾವುದೇ ಇತರ ಉಸಿರಾಟದ ವೈರಸ್‌ನಂತೆ ಸಾಮಾನ್ಯ ಶೀತವನ್ನು ಉಂಟುಮಾಡುತ್ತದೆ ಮತ್ತು ವಯಸ್ಸಾದವರಲ್ಲಿ ಮತ್ತು ಚಿಕ್ಕವರಲ್ಲಿ ಇದು ಜ್ವರಕ್ಕೆ ಕಾರಣವಾಗಬಹುದು ಎಂದು ವಿವರಿಸಿದರು.

 


Spread the love

LEAVE A REPLY

Please enter your comment!
Please enter your name here