• About
  • Advertise
  • Privacy & Policy
  • Contact
Thursday, November 12, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

KPSC ಪರೀಕ್ಷಾರ್ಥಿಗಳಿಗೆ ಮಹತ್ವದ ಸೂಚನೆ: 319 ಹುದ್ದೆಗಳ ಪರೀಕ್ಷೆಗೆ ಹೊಸ ನಿಯಮ; OMRನಲ್ಲಿ 5ನೇ ಆಯ್ಕೆ ಕಡ್ಡಾಯ

Vijaya Sakshi News Desk by Vijaya Sakshi News Desk
November 12, 2026
in Karnataka News
ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ: ಸಿಎಂ ಡಿ ಕೆ ಶಿವಕುಮಾರ್
0
SHARES
2
VIEWS
Share on Facebook

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಲಿರುವ 319 ಗಜೆಟೆಡ್ ಪ್ರೊಬೇಷನರ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಸಿದ್ಧತೆ ಕೈಗೊಂಡಿದೆ. ನವೆಂಬರ್ 15ರಂದು ನಡೆಯಲಿರುವ ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದಂತೆ ನಡೆಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪರೀಕ್ಷಾ ಸಿಬ್ಬಂದಿಗೆ ಚುನಾವಣೆ ಮಾದರಿಯಲ್ಲಿ ತರಬೇತಿ ನೀಡಿ, ಅದರ ವರದಿ ಸಲ್ಲಿಸುವಂತೆಯೂ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಗೃಹಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಮುಖ್ಯಮಂತ್ರಿ, ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯ ಸಿದ್ಧತೆಗಳನ್ನು ಪರಿಶೀಲಿಸಿದರು. ಪರೀಕ್ಷಾ ಕೇಂದ್ರಗಳ ಭದ್ರತೆ, ಸಿಬ್ಬಂದಿ ನಿಯೋಜನೆ ಹಾಗೂ ಅಕ್ರಮ ತಡೆಗೆ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು; ಮೊಬೈಲ್‌ಗೆ ಸಂಪೂರ್ಣ ನಿಷೇಧ!

ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮ ನಡೆಯದಂತೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು. ಕೆಪಿಎಸ್‌ಸಿ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ಎಲ್ಲ ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ನಿಗಾ ವಹಿಸಬೇಕು. ಪೊಲೀಸ್ ನೇಮಕಾತಿ ಪರೀಕ್ಷೆಗಳ ಮಾದರಿಯಲ್ಲಿ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷಾ ಕೇಂದ್ರಗಳ ಆವರಣಕ್ಕೆ ಅನಧಿಕೃತ ವ್ಯಕ್ತಿಗಳು ಪ್ರವೇಶಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಅನುಮತಿ ಪಡೆದ ವ್ಯಕ್ತಿಗಳೂ ಕಡ್ಡಾಯವಾಗಿ ಭದ್ರತಾ ತಪಾಸಣೆಗೆ ಒಳಪಡಬೇಕು. ಮಾರ್ಗಸೂಚಿಯಲ್ಲಿ ಅನುಮತಿಸಿರುವ ವಸ್ತುಗಳನ್ನು ಮಾತ್ರ ಪರೀಕ್ಷಾ ಕೇಂದ್ರಕ್ಕೆ ತರಲು ಅವಕಾಶವಿರುತ್ತದೆ.

ಯಾವುದೇ ಕಾರಣಕ್ಕೂ ಅಭ್ಯರ್ಥಿಗಳು ಮೊಬೈಲ್ ಫೋನ್‌ನೊಂದಿಗೆ ಪರೀಕ್ಷಾ ಕೇಂದ್ರ ಪ್ರವೇಶಿಸುವಂತಿಲ್ಲ. ಇಂತಹ ಪ್ರಕರಣಗಳು ಕಂಡುಬಂದರೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.

ಮೊದಲ ಬಾರಿಗೆ ಪ್ರತಿ ಪರೀಕ್ಷಾ ಕೊಠಡಿಗೆ ಇಬ್ಬರು ಮೇಲ್ವಿಚಾರಕರು!

ಪರೀಕ್ಷಾ ಅಕ್ರಮಗಳನ್ನು ತಡೆಯಲು ಈ ಬಾರಿ ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಇಬ್ಬರು ಮೇಲ್ವಿಚಾರಕರನ್ನು ನಿಯೋಜಿಸಲಾಗುತ್ತಿದೆ. ಇವರಲ್ಲಿ ಒಬ್ಬರು ಕಡ್ಡಾಯವಾಗಿ ಸರ್ಕಾರಿ ಕಾಲೇಜಿನ ಸಿಬ್ಬಂದಿಯಾಗಿರಬೇಕು ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ.

ಅಭ್ಯರ್ಥಿಗಳ ಗುರುತಿನ ಚೀಟಿ ಪರಿಶೀಲನೆ, ಭದ್ರತಾ ತಪಾಸಣೆ ಹಾಗೂ ಪರೀಕ್ಷಾ ಕೊಠಡಿಯೊಳಗಿನ ಚಟುವಟಿಕೆಗಳ ಮೇಲೆ ನಿಗಾ ವಹಿಸಲು ಇಬ್ಬರು ಮೇಲ್ವಿಚಾರಕರ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ.

ನಕಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುವುದನ್ನು ತಡೆಯಲು ವಿಶೇಷ ಕ್ರಮ ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರಗಳ ಸೂಕ್ಷ್ಮತೆಯನ್ನು ಆಧರಿಸಿ ಸಿಬ್ಬಂದಿ ನಿಯೋಜಿಸಬೇಕು. ಅಗತ್ಯವಿದ್ದರೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ಬೇರೆಡೆಗಳಿಂದ ನಿಯೋಜಿಸಬೇಕು ಎಂದು ಸೂಚಿಸಲಾಗಿದೆ.

ಉತ್ತರ ಗೊತ್ತಿಲ್ಲದಿದ್ದರೂ OMR ಖಾಲಿ ಬಿಡುವಂತಿಲ್ಲ!

ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯಲ್ಲಿ ಈ ಬಾರಿ ಐದು ಆಯ್ಕೆಗಳ OMR ಪದ್ಧತಿಯನ್ನು ಜಾರಿಗೆ ತರಲಾಗುತ್ತಿದೆ. ಪ್ರಶ್ನೆಗೆ ಉತ್ತರ ಗೊತ್ತಿಲ್ಲದಿದ್ದರೆ ಅಭ್ಯರ್ಥಿಗಳು ಕಡ್ಡಾಯವಾಗಿ ಐದನೇ ಆಯ್ಕೆಯನ್ನು ಗುರುತಿಸಬೇಕು. ಯಾವುದೇ ಪ್ರಶ್ನೆಯ ಉತ್ತರವನ್ನು ಖಾಲಿ ಬಿಡುವಂತಿಲ್ಲ ಎಂದು ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕ ಹೆಚ್. ಪ್ರಸನ್ನ ಅವರು ಸಭೆಯಲ್ಲಿ ಮಾಹಿತಿ ನೀಡಿದರು.

ಪರೀಕ್ಷೆಯ ಪಾರದರ್ಶಕತೆ ಹೆಚ್ಚಿಸಲು ತ್ರಿಪ್ರತಿ OMR ಉತ್ತರಪತ್ರಿಕೆ ವ್ಯವಸ್ಥೆಯನ್ನೂ ಜಾರಿಗೆ ತರಲಾಗುತ್ತಿದೆ. ಒಂದು ಪ್ರತಿಯನ್ನು ಅಭ್ಯರ್ಥಿಗೆ ನೀಡಲಾಗುತ್ತದೆ. ಮತ್ತೊಂದು ಪ್ರತಿ ಕೆಪಿಎಸ್‌ಸಿ ಮೌಲ್ಯಮಾಪನಕ್ಕೆ ಬಳಸಲಾಗುತ್ತದೆ. ಮೂರನೇ ಪ್ರತಿಯನ್ನು ಜಿಲ್ಲಾಧಿಕಾರಿ ಅಥವಾ ಕೆಪಿಎಸ್‌ಸಿ ಸ್ಟ್ರಾಂಗ್ ರೂಮ್‌ನಲ್ಲಿ ಸುರಕ್ಷಿತವಾಗಿ ಇರಿಸಲಾಗುತ್ತದೆ.

ಪರೀಕ್ಷೆ ನಡೆದ ದಿನವೇ ವೆಬ್‌ಸೈಟ್‌ನಲ್ಲಿ OMR ಪ್ರತಿಗಳು!

ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ಉದ್ದೇಶದಿಂದ ಪರೀಕ್ಷೆ ನಡೆದ ದಿನವೇ ಸ್ಕ್ಯಾನ್ ಮಾಡಿದ OMR ಉತ್ತರಪತ್ರಿಕೆಗಳನ್ನು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಸಾರ್ವಜನಿಕರ ವೀಕ್ಷಣೆಗೆ ಅಪ್‌ಲೋಡ್ ಮಾಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ರಾಜ್ಯದ 12 ಜಿಲ್ಲೆಗಳಲ್ಲಿ OMR ಉತ್ತರಪತ್ರಿಕೆಗಳನ್ನು ಸ್ಕ್ಯಾನ್ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ.

ಎಲ್ಲ ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಹಾಗೂ ಮೊಬೈಲ್ ಜಾಮರ್‌ಗಳನ್ನು ಅಳವಡಿಸಲಾಗುತ್ತದೆ. ಜಾಮರ್‌ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೇ ದೃಢೀಕರಿಸಬೇಕು ಎಂದು ಸೂಚಿಸಲಾಗಿದೆ.

ಪರೀಕ್ಷಾ ಅಕ್ರಮ ನಡೆದರೆ ಖಾಸಗಿ ಕಾಲೇಜುಗಳ ಪರವಾನಗಿ ರದ್ದು!

ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಸ್ಥಾಪಿಸಿರುವ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶ ನೀಡಿರುವುದು ಕಂಡುಬಂದರೆ ಅಂತಹ ಕಾಲೇಜುಗಳ ಪರವಾನಗಿಯನ್ನು ರದ್ದುಪಡಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಸಿದ್ದಾರೆ. ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಸುಳ್ಳು ವದಂತಿಗಳಿಗೆ ಕಿವಿಗೊಡದಂತೆ ಅಭ್ಯರ್ಥಿಗಳಿಗೆ ಮನವಿ!

ಪರೀಕ್ಷೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಡದಂತೆ ಪೊಲೀಸ್ ಇಲಾಖೆ ನಿಗಾ ವಹಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ.

ಯಾವುದೇ ವದಂತಿ ಹರಡಿದರೆ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು. ಅಭ್ಯರ್ಥಿಗಳು ಹಾಗೂ ಮಾಧ್ಯಮದವರು ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಯನ್ನು ಅಧಿಕೃತ ಮೂಲಗಳಿಂದ ಪರಿಶೀಲಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಅಭ್ಯರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಮನವಿ ಮಾಡಿದ್ದಾರೆ.

ಮುಂದಿನ ಪರೀಕ್ಷೆಗಳಿಗೆ ಆಧಾರ್ ಆಧಾರಿತ ಗುರುತು ಪರಿಶೀಲನೆ!

ಮುಂದಿನ ನೇಮಕಾತಿ ಪರೀಕ್ಷೆಗಳಲ್ಲಿ ನಕಲಿ ಅಭ್ಯರ್ಥಿಗಳ ಹಾಜರಾತಿ ತಡೆಯಲು ಇ-ಆಡಳಿತ ಇಲಾಖೆಯ ಮೂಲಕ ಆಧಾರ್ ಆಧಾರಿತ ಗುರುತು ಪರಿಶೀಲನಾ ವ್ಯವಸ್ಥೆಯನ್ನು ಜಾರಿಗೆ ತರಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ತಾಂತ್ರಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ OMR ಸ್ಕ್ಯಾನಿಂಗ್ ಕೇಂದ್ರಗಳನ್ನು ಸ್ಥಾಪಿಸಿ, ಪರೀಕ್ಷಾ ಫಲಿತಾಂಶವನ್ನು ತ್ವರಿತವಾಗಿ ಪ್ರಕಟಿಸಲು ಕ್ರಮ ಕೈಗೊಳ್ಳುವಂತೆಯೂ ನಿರ್ದೇಶಿಸಿದ್ದಾರೆ.

ಸಿಂಧುತ್ವ ಪ್ರಮಾಣಪತ್ರ ನೀಡುವಲ್ಲಿ ವಿಳಂಬ ಬೇಡ!

ನೇಮಕಾತಿ ಪ್ರಕ್ರಿಯೆಗೆ ಅಗತ್ಯವಿರುವ ಸಿಂಧುತ್ವ ಪ್ರಮಾಣಪತ್ರಗಳನ್ನು ಆದ್ಯತೆಯ ಮೇರೆಗೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಈಗಾಗಲೇ ಹಲವು ನೇಮಕಾತಿ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಿದ್ದರೂ ಸಿಂಧುತ್ವ ಪ್ರಮಾಣಪತ್ರ ನೀಡುವಲ್ಲಿ ವಿಳಂಬವಾಗುತ್ತಿರುವುದರಿಂದ ನೇಮಕಾತಿ ಪ್ರಕ್ರಿಯೆ ತಡವಾಗುತ್ತಿದೆ. ಇಂತಹ ಪರಿಸ್ಥಿತಿ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

Tags: BreakingNewsCM DK ShivakumarKarnatakaKPSC Exam CCTV MonitoringKPSC Two InvigilatorsNewsHeadlinesVijayasakshivijayasakshinews
ShareSendShare
Previous Post

KSRTC ಮಹಿಳಾ ಮೆಕ್ಯಾನಿಕ್ ಮೇಲೆ ಚಾಕುವಿನಿಂದ ಹಲ್ಲೆ: ಸಾಕ್ಷಿ ಹೇಳಿದ್ದಕ್ಕೆ ಸೇಡು ಆರೋಪ, ಆರೋಪಿ ಪರಾರಿ

Next Post

ಲಕ್ಷ್ಮೀ ಪೂಜೆ ಮಾಡಿದ್ರೆ ಹಣದ ಮಳೆ ಸುರಿಯುತ್ತೆಂದು ಯುವತಿಯರಿಗೆ ಬಲೆ: ಹೈಟೆಕ್ ವೇಶ್ಯಾವಾಟಿಕೆ ಜಾಲ ಬಯಲು; 11 ಮಂದಿ ಬಂಧನ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಲಕ್ಷ್ಮೀ ಪೂಜೆ ಮಾಡಿದ್ರೆ ಹಣದ ಮಳೆ ಸುರಿಯುತ್ತೆಂದು ಯುವತಿಯರಿಗೆ ಬಲೆ: ಹೈಟೆಕ್ ವೇಶ್ಯಾವಾಟಿಕೆ ಜಾಲ ಬಯಲು; 11 ಮಂದಿ ಬಂಧನ!

ಲಕ್ಷ್ಮೀ ಪೂಜೆ ಮಾಡಿದ್ರೆ ಹಣದ ಮಳೆ ಸುರಿಯುತ್ತೆಂದು ಯುವತಿಯರಿಗೆ ಬಲೆ: ಹೈಟೆಕ್ ವೇಶ್ಯಾವಾಟಿಕೆ ಜಾಲ ಬಯಲು; 11 ಮಂದಿ ಬಂಧನ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್‌. ಅಶೋಕ್

ಎಥೆನಾಲ್ ಪೆಟ್ರೋಲ್ ವಿವಾದ: ಮೈಲೇಜ್ ಕಡಿಮೆಯಾಗಲು ರಸ್ತೆ ಗುಂಡಿಗಳೇ ಕಾರಣ – ಕಾಂಗ್ರೆಸ್ ಆರೋಪಕ್ಕೆ ಅಶೋಕ್ ತಿರುಗೇಟು

November 12, 2026
ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರದ ಬಿಗ್ ಸ್ಟೆಪ್: 10 ವರ್ಷ ಜೈಲು, ₹1 ಕೋಟಿ ದಂಡಕ್ಕೆ ಕಠಿಣ ಕಾನೂನು!

12 ವರ್ಷಗಳಲ್ಲಿ 50 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ; ವಿಶ್ವಬ್ಯಾಂಕ್ ವರದಿ ಉಲ್ಲೇಖಿಸಿ ಪ್ರಧಾನಿ ಮೋದಿ ಹೇಳಿಕೆ

November 12, 2026
ಬಾಕ್ಸ್ ಆಫೀಸ್‌ನಲ್ಲಿ ‘ರಾಮಾಯಣ’ ಅಬ್ಬರ: 7 ದಿನಕ್ಕೆ 934 ಕೋಟಿ ರೂ. ಗಳಿಕೆ, 1000 ಕೋಟಿಯತ್ತ ಯಶ್ ಸಿನಿಮಾ!

ಬಾಕ್ಸ್ ಆಫೀಸ್‌ನಲ್ಲಿ ‘ರಾಮಾಯಣ’ ಅಬ್ಬರ: 7 ದಿನಕ್ಕೆ 934 ಕೋಟಿ ರೂ. ಗಳಿಕೆ, 1000 ಕೋಟಿಯತ್ತ ಯಶ್ ಸಿನಿಮಾ!

November 12, 2026
ಲಕ್ಷ್ಮೀ ಪೂಜೆ ಮಾಡಿದ್ರೆ ಹಣದ ಮಳೆ ಸುರಿಯುತ್ತೆಂದು ಯುವತಿಯರಿಗೆ ಬಲೆ: ಹೈಟೆಕ್ ವೇಶ್ಯಾವಾಟಿಕೆ ಜಾಲ ಬಯಲು; 11 ಮಂದಿ ಬಂಧನ!

ಲಕ್ಷ್ಮೀ ಪೂಜೆ ಮಾಡಿದ್ರೆ ಹಣದ ಮಳೆ ಸುರಿಯುತ್ತೆಂದು ಯುವತಿಯರಿಗೆ ಬಲೆ: ಹೈಟೆಕ್ ವೇಶ್ಯಾವಾಟಿಕೆ ಜಾಲ ಬಯಲು; 11 ಮಂದಿ ಬಂಧನ!

November 12, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್‌. ಅಶೋಕ್

ಎಥೆನಾಲ್ ಪೆಟ್ರೋಲ್ ವಿವಾದ: ಮೈಲೇಜ್ ಕಡಿಮೆಯಾಗಲು ರಸ್ತೆ ಗುಂಡಿಗಳೇ ಕಾರಣ – ಕಾಂಗ್ರೆಸ್ ಆರೋಪಕ್ಕೆ ಅಶೋಕ್ ತಿರುಗೇಟು

November 12, 2026
ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರದ ಬಿಗ್ ಸ್ಟೆಪ್: 10 ವರ್ಷ ಜೈಲು, ₹1 ಕೋಟಿ ದಂಡಕ್ಕೆ ಕಠಿಣ ಕಾನೂನು!

12 ವರ್ಷಗಳಲ್ಲಿ 50 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ; ವಿಶ್ವಬ್ಯಾಂಕ್ ವರದಿ ಉಲ್ಲೇಖಿಸಿ ಪ್ರಧಾನಿ ಮೋದಿ ಹೇಳಿಕೆ

November 12, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper