ಬೆಂಗಳೂರು: ಜಾತಿಗಣತಿಯಲ್ಲಿ ನಮ್ಮ ಧರ್ಮಕ್ಕೆ ಪ್ರತ್ಯೇಕ ಕಾಲಂ ನೀಡಲು ಒತ್ತಾಯಿಸುತ್ತೇವೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾವೆಲ್ಲರೂ ಭೌಗೋಳಿಕವಾಗಿ ಹಿಂದೂಗಳೇ ಆದರೂ,
ನಮ್ಮ ಆಚಾರ-ವಿಚಾರವನ್ನು ಗೌರವಿಸಿ ಸಿಖ್, ಪಾರ್ಸಿ, ಜೈನರಿಗೆ ನೀಡಿರುವಂತೆ ಪ್ರತ್ಯೇಕ ಧರ್ಮದ ಮಾನ್ಯತೆಯನ್ನು ವೀರಶೈವ-ಲಿಂಗಾಯತ ಧರ್ಮಕ್ಕೂ ನೀಡಬೇಕು ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಸ್ವಾತಂತ್ರ್ಯಪೂರ್ವದಿಂದ ಅದರಲ್ಲೂ ವಿಶೇಷವಾಗಿ 2000ನೇ ಇಸವಿಯಲ್ಲಿ ನಡೆದ ಜನಗಣತಿಯಿಂದಲೂ ಪ್ರತಿಪಾದಿಸುತ್ತಾ ಬಂದಿದೆ.
ಜಾತಿಗಣತಿಯಲ್ಲಿ ನಮ್ಮ ಧರ್ಮಕ್ಕೆ ಪ್ರತ್ಯೇಕ ಕಾಲಂ ನೀಡಲು ಒತ್ತಾಯಿಸುತ್ತೇವ ಎಂದು ತಿಳಿಸಿದರು. ವೀರಶೈವ-ಲಿಂಗಾಯತ ಸಮಾನಾರ್ಥಕ ಪದಗಳು. ಇಷ್ಟಲಿಂಗ ಪೂಜೆ ಮಾಡುವವರು ಮತ್ತು ಅಷ್ಟಾವರ್ಣ, ಪಂಚಾಚಾರ, ಷಟ್‌ಸ್ಥಳ ಆಚರಣೆ ಮಾಡುವ ಗುರುಗಳು ಮತ್ತು ವಿರಕ್ತರೂ ಇದ್ದಾರೆ. ಹೀಗಾಗಿ ವೀರಶೈವರು ಮತ್ತು ಲಿಂಗಾಯತರು ಒಟ್ಟಿಗೆ ಇರಬೇಕು ಎಂಬುದು ಸಭಾದ ಸ್ಪಷ್ಟ ನಿಲುವು ಎಂದು ಹೇಳಿದರು.