ಚನ್ನಪಟ್ಟಣದಲ್ಲಿ ಮತದಾರರ ಸೆಳೆಯಲು ಮತಗಟ್ಟೆ ಒಳಗೆ ಗೊಂಬೆಗಳ ಪ್ರದರ್ಶನ!

0
Spread the love

ರಾಮನಗರ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಆರಂಭವಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ, ಬಳ್ಳಾರಿ ಜಿಲ್ಲೆಯ ಸಂಡೂರು, ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 276 ಮತಗಟ್ಟೆಗಳ ಸ್ಥಾಪನೆ ಮಾಡಗಿದೆ.

Advertisement

ನಗರ ಪ್ರದೇಶದಲ್ಲಿ 62, ಗ್ರಾಮೀಣ ಪ್ರದೇಶದಲ್ಲಿ 214 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. 276 ಮತಗಟ್ಟೆಗಳಲ್ಲಿ ಆಯೋಗ ವೆಬ್​ಕಾಸ್ಟಿಂಗ್ ವ್ಯವಸ್ಥೆ ಮಾಡಿದೆ. 276 ಮತಗಟ್ಟೆಗಳ ಪೈಕಿ 119 ಮತಗಟ್ಟೆಗಳನ್ನು ಸೂಕ್ಷ್ಮವೆಂದು ಗುರುತಿಸಲಾಗಿದೆ. ಚುನಾವಣಾ ಆಯೋಗ 119 ಮೈಕ್ರೋ ಅಬ್ಸರ್ವರ್ಸ್ ನಿಯೋಜಿಸಲಾಗಿದೆ. ಚನ್ನಪಟ್ಟಣ ಗೊಂಬೆಗಳಿಗೆ ವಿಶ್ವ ವಿಖ್ಯಾತಿ ಪಡೆದಿದೆ. ಇಲ್ಲಿನ ಗೊಂಬೆಗಳಿಗೆ ಭಾರಿ ಬೇಡಿಕೆ ಇದೆ.

ಹೀಗಾಗಿ ಚುನಾವಣಾ ಆಯೋಗ ಗೊಂಬೆ ಮತಗಟ್ಟೆ ನಿರ್ಮಾಣ ಮಾಡಿದೆ. ಈ ಮೂಲಕ ಚನ್ನಪಟ್ಟಣ ಗೊಂಬೆಗಳ ವಿಶೇಷ ಪ್ರಾಶಸ್ತ್ಯ ನೀಡಿದೆ. ಚನ್ನಪಟ್ಟಣದ ಕೋಟೆ ಬಡಾವಣೆಯಲ್ಲಿ ವಿಶೇಷ ಸಾಂಪ್ರದಾಯಿಕ ಗೊಂಬೆ ಮತಗಟ್ಟೆ ನಿರ್ಮಿಸಲಾಗಿದೆ. ಮತಗಟ್ಟೆ ಹೊರಭಾಗದಲ್ಲಿ ಆಕರ್ಷಕ ಬಲೂನ್ ಕಮಾನು, ಗೊಂಬೆಗಳ ಫ್ಲೆಕ್ಸ್ ಅಳವಡಿಸಲಾಗಿದೆ. ಮತದಾನ ಮಾಡಲು ಬಂದಿರುವ ಮತದಾರರು ಗೊಂಬೆ ಮತಗಟ್ಟೆ ಕಂಡು ಹರ್ಷಗೊಂಡಿದ್ದಾರೆ.

ಗೊಂಬೆ ಮತಗಟ್ಟೆ ಒಳಗೆ ಗೊಂಬೆಗಳನ್ನು ಕೂರಿಸಲಾಗಿದೆ. ಚನ್ನಪಟ್ಟಣದ ಸಾಂಪ್ರದಾಯಿಕ ಗೊಂಬೆಗಳ ಪ್ರದರ್ಶನ ಮಾಡಲಾಗುತ್ತಿದೆ. ಮರದಿಂದ ತಯಾರಿಸಿದ ರೈತರ ಜೀವನಾಡಿ ಎತ್ತಿನ ಗಾಡಿ, ರಾಜ, ರಾಣಿ ಗೊಂಬೆಗಳು, ಮಕ್ಕಳ ಆಟಿಕೆಗಳು, ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿ, ಅರಮನೆ ಮತ್ತು ಶ್ರೀರಾಮ ಮಂದಿರ ಸೇರಿ ವಿವಿಧ ಗೊಂಬೆಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಸಮರದಲ್ಲಿ ಒಟ್ಟು 45 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಂದು ಮತದಾರರು ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದು, ನವೆಂಬರ್​ 23ರಂದು ಉಪ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.


Spread the love

LEAVE A REPLY

Please enter your comment!
Please enter your name here