ನನ್ನ ಪ್ರಕಾರ 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ: ಯತೀಂದ್ರ!

0
Spread the love

ಮೈಸೂರು: ನನ್ನ ಪ್ರಕಾರ 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು,

Advertisement

ನನ್ನ ಪ್ರಕಾರ 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ. ಸಿಎಂ ಬದಲಾವಣೆ ಚರ್ಚೆ ಹೈಕಮಾಂಡ್‌ ಮುಂದೆ ನಡೆದಿಲ್ಲ. ಎಐಸಿಸಿ ಕಾರ್ಯದರ್ಶಿ ಈಗಾಗಲೇ ಇದನ್ನು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಇನ್ನೂ ಓಬಿಸಿ ಸಮಿತಿಗೆ ಸಿಎಂ ಆಯ್ಕೆ ಕುರಿತ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರ್ರಿ ಹೇಳಿದ್ದು ಮುಖ್ಯಮಂತ್ರಿ ಆದವರನ್ನ ಓಬಿಸಿ ಕಮಿಟಿಗೆ ಕಳುಹಿಸಿದ್ರೆ ಪ್ರಮೋಷನ್ನಾ? ಅಂತ ಕೆಂಡಾಮಂಡಲರಾದರು.

ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗದ ನಾಯಕ. ದೇಶದಲ್ಲಿರುವ ಹಿಂದುಳಿದ ವರ್ಗಗಳ ನಾಯಕರು ಆ ಕಮಿಟಿಯಲ್ಲಿದ್ದಾರೆ. ಹಾಗಾಗಿ ಅಲ್ಲಿ ಸದಸ್ಯರಾಗಿರುತ್ತಾರೆ. ಅದಕ್ಕೂ ಸಿಎಂ ಬದಲಾವಣೆ ವಿಚಾರಕ್ಕೂ ಸಂಬಂಧ ಕಲ್ಪಿಸುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here