ನಮ್ಮ ಮೆಟ್ರೋದಲ್ಲಿ ಯುವತಿಯ ಖಾಸಗಿ ಫೋಟೋ ಸೆರೆಹಿಡಿದ ಕಾಮುಕ ಅರೆಸ್ಟ್!

0
Spread the love

ಬೆಂಗಳೂರು:- ನಮ್ಮ ಮೆಟ್ರೋದಲ್ಲಿ ಯುವತಿಯ ಖಾಸಗಿ ಫೋಟೋ ಸೆರೆಹಿಡಿದ ಕಾಮುಕನನ್ನು ಜಯನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಮಹೇಶ್ ಬಂಧಿತ ಆರೋಪಿ. ಒಂದು ವಾರದ ಹಿಂದೆ ಡಿಸೆಂಬರ್​ 25ನೇ ತಾರೀಕು ಬೆಳಗ್ಗೆ 9 ಗಂಟೆ ಸುಮಾರಿಗೆ ಯುವತಿ ಮೆಜೆಸ್ಟಿಕ್​​ನಿಂದ ಜೆ.ಪಿ ನಗರಕ್ಕೆ ಪ್ರಯಾಣ ಬೆಳೆಸಿದ್ದರು. ಈ ಸಂದರ್ಭದಲ್ಲಿ ಮಹೇಶ್​ ಎಂಬ ಕಾಮುಕ ಯುವತಿ ಫೋಟೋ, ವಿಡಿಯೋ ತೆಗೆದಿದ್ದಾನೆ. ವಿಷಯ ತಿಳಿದು ಸಿಟ್ಟಿಗೆದ್ದ ಯುವತಿ ಆತನ ಕಪಾಳಕ್ಕೆ ಬಾರಿಸಿದ್ದಾಳೆ.

ಇದೇ ವೇಳೆ ಡ್ಯೂಟಿ ಮುಗಿಸಿ ಮನೆ ಕಡೆ ಹೊರಟಿದ್ದ ಮೆಟ್ರೋ ಸಿಬ್ಬಂದಿ ಯುವತಿ ನೆರವಿಗೆ ಧಾವಿಸಿದ್ದಾರೆ. ಸದ್ಯ ಕಾಮುಕ ಮಹೇಶ್​​ನನ್ನು ಜಯನಗರ ಪೊಲೀಸರಿಗೆ ಒಪ್ಪಿಸಲಾಗಿದೆ. ಪೊಲೀಸ್ರು ಆರೋಪಿ ಮೊಬೈಲ್​ ಪರಿಶೀಲಿಸಿದಾಗ ಸಾಕಷ್ಟು ವಿಡಿಯೋಗಳು ಸಿಕ್ಕಿವೆ. ಆರೋಪಿಯನ್ನು ಬಂಧಿಸಿದ್ದಲ್ಲದೇ ನಮ್ಮ ಮೆಟ್ರೋ 5 ಸಾವಿರ ದಂಡ ವಿಧಿಸಿದೆ.


Spread the love

LEAVE A REPLY

Please enter your comment!
Please enter your name here