ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಬೆಳಗಲಿ ಗ್ರಾಮದಲ್ಲಿ ಸಿಂಟೆಕ್ಸ್ ಟ್ಯಾಂಕ್‌ನಲ್ಲಿ ಪೆಟ್ರೋಲ್ ತುಂಬಿಸಿ ಶೆಡ್ ಮೇಲೆ ಸುರಿದು ಬೆಂಕಿ ಹಚ್ಚಿದ ಪರಿಣಾಮ ತಾಯಿ-ಮಗಳು ಸಜೀವ ದಹನವಾಗಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಜೈಬಾನ್ (55), ಶಬಾನ್ (25) ಮೃತ ದುರ್ದೈವಿಗಳು.
Advertisement
ಬೆಂಕಿ ಹಚ್ಚಿದ ಪರಿಣಾಮ ತಾಯಿ-ಮಗಳು ಸಜೀವ ದಹನವಾಗಿದ್ದುವ, ಶೆಡ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ದಸ್ತಗೀರಸಾಬ್, ಸುಬಾನ್ ಹಾಗೂ ಸಿದ್ದಿಕಿ ಎಂಬವರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಹಾಲಿಂಗಪುರ ಪೊಲೀಸರು ಭೇಟಿ ನೀಡಿದ್ದು, ಶ್ವಾನ ದಳ ಮೂಲಕ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಬಾಗಲಕೋಟೆ ಎಸ್‌ಪಿ ಅಮರನಾಥ ರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.