ವಿಜಯಸಾಕ್ಷಿ ಸುದ್ದಿ, ಗದಗ : ಇತ್ತೀಚಿನ ಕಲುಷಿತ ವಾತಾವರಣದಲ್ಲಿ ರೋಗಗಳಿಂದ ಮುಕ್ತವಾಗಬೇಕಾದರೆ ಶುದ್ಧ ನೀರು ಸೇವನೆ ಅತ್ಯವಶ್ಯ. ಅಂತಹ ಶುದ್ಧ ಕುಡಿಯುವ ನೀರನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿಕೊಟ್ಟ ಪುಣ್ಯ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ಸಲ್ಲುತ್ತದೆ ಎಂದು ನಿವೃತ್ತ ಡಿ.ಡಿ.ಪಿ.ಐ. ಎಮ್.ಎ. ರಡ್ಡೇರ್ ಅಭಿಪ್ರಾಯಪಟ್ಟರು.
ಅವರು ಸಭಾಪತಿ ಬಸವರಾಜ ಹೊರಟ್ಟಿ ದಂಪತಿಗಳು ದತ್ತು ಪಡೆದ ಸಿದ್ದಲಿಂಗ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ನಿರ್ಮಾಣಗೊಂಡ ಶುದ್ಧ ನೀರು ಘಟಕ ಹಾಗೂ ಗದಗ ಬೆಟಗೇರಿ ನಗರಸಭೆಯ ನೆರವಿನ ಹೈಮಾಸ್ಟ್ ದೀಪವನ್ನು ಸಾಂಕೇತಿಕವಾಗಿ ಲೋಕಾರ್ಪಣೆಗೊಳಿಸುವ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಹಲವಾರು ದಾನಿಗಳ ನೆರವಿನಿಂದ ಸರ್ಕಾರಿ ಪ್ರೌಢಶಾಲೆ ಒಂದು ಹೊಸ ಕಳೆಯನ್ನು ಕಟ್ಟಿಕೊಂಡು ಜಿಲ್ಲೆಯಲ್ಲಿಯೇ ಮಾದರಿ ಶಾಲೆಯಾಗಿ ಮೂಡಿ ಬಂದಿದೆ. ಶಿಕ್ಷಣ ಇಲಾಖೆಗೆ ಈ ಸಂಗತಿ ಅತ್ಯಂತ ಅಭಿಮಾನ ಹಾಗೂ ಹೆಮ್ಮೆಯದಾಗಿದೆ. ಹೊರಟ್ಟಿಯವರ ಸೇವೆಯನ್ನು ಹಾಗೂ ದಾನಿಗಳ ಉಪಕಾರವನ್ನು ಎಷ್ಟು ಸ್ಮರಿಸಿದರೂ ಕಡಿಮೆಯೇ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗದಗ ಶಹರದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ, ನಗರಸಭೆ ಸದಸ್ಯೆ ವಿದ್ಯಾವತಿ ಗಡಗಿ, ನಿವೃತ್ತ ಮುಖ್ಯೋಪಾಧ್ಯಾಯ ಎಸ್.ಎಂ. ಅಗಡಿ ಸೇರಿದಂತೆ ಅಧ್ಯಕ್ಷತೆ ವಹಿಸಿದ್ದ ಪ್ರಭಾರಿ ಮುಖ್ಯೋಪಾಧ್ಯಾಯರಾದ ಜಯಲಕ್ಷ್ಮಿ ಅಣ್ಣಿಗೇರಿಯವರು ಮಾತನಾಡಿದರು.
ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಅಮರೇಶ ಗಡಗಿ, ತೋಟಗಾರಿಕೆ ಇಲಾಖೆ ಅಧಿಕಾರಿ ಶಂಭುಲಿAಗ ನೆಗಳೂರ, ಸುನೀಲ ವೆರ್ಣೆಕರ್, ಸಂತೋಷ ಪಾಟೀಲ, ಮಲ್ಲಪ್ಪ ಜಿನಗಿ, ಮೈಲಾರಪ್ಪ ಹುಯಿಲಗೋಳ, ಮಂಜುನಾಥ ಹುಡೇದ, ರೇಖಾ ಬಾವಿ, ಮಾರುತಿ ಚಲವಾದಿ, ರೇಣುಕಾ ರೋಣದ, ಶಿವಶಿಂಪರ, ಬಾಕಳೆ, ಶಿಕ್ಷಕರಾದ ಸುಭಾಸ ನಿಡಸನೂರ, ಎ.ಎಮ್. ಸಂಗನಾಳ, ಶಂಕ್ರಮ್ಮ ಆರ್. ಹಣಮಗೌಡ್ರು, ಎಂ.ಐ. ಶಿವನಗೌಡ್ರು, ಮಂಜುಳಾ ಪಿ.ಸಾಮ್ರಾಣಿ, ಸುಮಂಗಲ ಎಂ.ಪತ್ತಾರ್, ಶಾರದಾ ಬಾಣದ, ಶೋಭಾ ಎಸ್.ಗಾಳಿ, ರಮೇಶ್ ಬಸರಿ, ಸಾವಿತ್ರಿ ಎ.ಗದ್ದನಕೇರಿ, ಎನ್.ಆರ್. ಶಿರೋಳ್, ಸಬಿಯಾ ಯು.ಕುಷ್ಟಗಿ, ಗಂಗಾ ಎಂ.ಅಳವಂಡಿ, ಮಂಜುಳಾ ಟಿ, ಪದ್ಮಾ ವಿ.ದಾಸರ್, ಲಕ್ಷ್ಮಮ್ಮ ಮಾಳೋತ್ತರ್ ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಸಂಜೀವಿನಿ ಕೂಲಗುಡಿ ನೆರವೇರಿಸಿದರು. ವಂದನಾರ್ಪಣೆಯನ್ನು ಶಶಿಕಲಾ ಬಿ.ಗುಳೇದವರ ಮಾಡಿದರು.
ಶಾಲೆಯ ದತ್ತು ಉಸ್ತುವಾರಿಗಳಾದ ಡಾ.ಬಸವರಾಜ ಧಾರವಾಡ ಮಾತನಾಡಿ, ಸಭಾಪತಿ ಬಸವರಾಜ ಹೊರಟ್ಟಿ ದಂಪತಿಗಳು ದತ್ತು ಪಡೆದ ಮೇಲೆ ಈ ಶಾಲೆಯಲ್ಲಿ ಹಲವಾರು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗಿದೆ. ಶೀಘ್ರದಲ್ಲಿಯೇ ಬೃಹತ್ ಕಾರ್ಯಕ್ರಮ ಆಯೋಜಿಸಿ ಪೂರ್ಣಗೊಂಡ ಎಲ್ಲ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದು ಹೇಳಿದರು.
Advertisement