ವಿಜಯಸಾಕ್ಷಿ ಸುದ್ದಿ, ರೋಣ: ಇಲ್ಲಿನ ರಾಜೀವ ಗಾಂಧಿ ಶಿಕ್ಷಣ ಸಂಸ್ಥೆಯ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ 2024-2026ನೇ ಸಾಲಿನ ಓIಒಂ ಗದಗ ಜಿಲ್ಲಾ ಮಹಿಳಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ನೂತನ ಸದಸ್ಯರ ಸ್ವಾಗತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಮಾರಂಭದ ಅಧ್ಯಕ್ಷತೆಯನ್ನು ಓIಒಂ ಗದಗ ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ. ಜಯಕುಮಾರ ಬ್ಯಾಳಿ ವಹಿಸಿದ್ದರು. ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ. ಪಾರ್ವತಿ ರಣತೂರ ಕಾರ್ಯಕ್ರಮ ಉದ್ಘಾಟಿಸಿದರು. ಓIಒಂ ಗದಗ ಜಿಲ್ಲಾ ಘಟಕದ ಗೌರವಾಧ್ಯಕ್ಷ ಡಾ. ಎಸ್.ಆರ್. ಹಿರೇಮಠ ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. ರಾಜೀವ ಗಾಂಧಿ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಕೆ.ಬಿ. ಧನ್ನೂರ, ಓIಒಂ ರಾಜ್ಯ ಘಟಕದ ಖಜಾಂಚಿ ಡಾ. ಶ್ರೀನಿವಾಸ ಹ್ಯಾಟಿ, ಓIಒಂ ವಿದ್ಯಾರ್ಥಿ ಘಟಕದ ಚೇರಮನ್, ರಾಜೀವ ಗಾಂಧಿ ಶಿಕ್ಷಣ ಸಂಸ್ಥೆಯ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಐ.ಬಿ. ಕೊಟ್ಟೂರಶೆಟ್ಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ವೇದಿಕೆಯ ಮೇಲೆ ಓIಒಂ ಗದಗ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ. ಬಸವರಾಜ ಚನ್ನಪ್ಪಗೌಡರ, ಖಜಾಂಚಿ ಡಾ. ಗಿರೀಶ ಬಡಿಗೇರ, ಗದಗ ಜಿಲ್ಲಾ ಮಹಿಳಾ ಘಟಕದ ನಿಕಟಪೂರ್ವ ಅಧ್ಯಕ್ಷರಾದ ಡಾ. ರಾಜೇಶ್ವರಿ ಹಿರೇಮಠ, ಕಾರ್ಯದರ್ಶಿ ಹಸೀನಾ ಭಾವನಗರಿ ಅತಿಥಿಗಳಾಗಿ ಉಪಸ್ಥಿತರಿದ್ದರು.
ಅಧ್ಯಕ್ಷರಾಗಿ ಡಾ. ಸರೋಜಾ ರಾಮಣ್ಣವರ, ಕಾರ್ಯದರ್ಶಿಗಳಾಗಿ ಡಾ. ವಾಣಿ ಚವಡಿ ಹಾಗೂ ಖಜಾಂಚಿಗಳಾಗಿ ಡಾ. ಮಂಗಳಾ ಪಾಟೀಲ ಅಧಿಕಾರ ವಹಿಸಿಕೊಂಡರು. ಡಾ. ಆನಂದ ಕೆರಿಯವರ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ. ವಾಣಿ ಚವಡಿ ವಂದಿಸಿದರು.