ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯ ರಾಮನಗರಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಲೋಕೋಪಯೋಗಿ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ 2022-23ನೇ ಸಾಲಿನ ವಿವೇಕ ಯೋಜನೆಯಡಿ ನಿರ್ಮಿಸಲಾದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ನಂ. 18ರ ನೂತನ ಕೊಠಡಿಯನ್ನು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಉದ್ಘಾಟಿಸಿದರು.
Advertisement
ಈ ಸಂದರ್ಭದಲ್ಲಿ ಬಿ.ಬಿ. ಅಸೂಟಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ, ಕೆ.ಡಿ.ಪಿ. ಸಮಿತಿಯ ಸದಸ್ಯ ಎಸ್.ಎನ್. ಬಳ್ಳಾರಿ ಸೇರಿದಂತೆ ಗಣ್ಯರು ಹಾಜರಿದ್ದರು.