ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಕೆ.ಎಲ್.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯವು ಕರ್ನಾಟಕ ನಾಟಕ ಅಕಾಡೆಮಿ, ಬೆಂಗಳೂರು ಮತ್ತು ನಟರಂಗ ಸಂಸ್ಥೆಯ ಸಹಭಾಗಿತ್ವದಲ್ಲಿ ‘ಕಾಲೇಜು ವಿದ್ಯಾರ್ಥಿಗಳಿಗಾಗಿ ರಂಗ ತರಬೇತಿ ಕಾರ್ಯಗಾರ’ವನ್ನು ಹಮ್ಮಿಕೊಂಡಿದೆ.
ಕಾರ್ಯಗಾರದ ಉದ್ಘಾಟನೆಯು ನ. 22ರಂದು ಬೆಳಿಗ್ಗೆ 11 ಗಂಟೆಗೆ ಮಹಾವಿದ್ಯಾಲಯದ ಸಭಾಂಗಣದಲ್ಲಿ ನೆರವೇರುವುದು. ಕಾರ್ಯಾಗಾರದ ಉದ್ಘಾಟಕರಾಗಿ ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯರಾದ ಗಾಯತ್ರಿ ಹಡಪದ, ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಚಾರ್ಯ ಡಾ. ಜಿ.ಬಿ. ಪಾಟೀಲ, ಕಸಾಪ ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ, ಸಾಹಿತಿ ಟಿ.ಎಸ್. ಗೊರವರ, ನಿವೃತ್ತ ಶಿಕ್ಷಕ ಮಹಾಂತೇಶ ಹೂಗಾರ, ನಟರಂಗ ಸಂಸ್ಥೆಯ ಸೋಮು ಚಿಕ್ಕಮಠ ಉಪಸ್ಥಿತರಿರುತ್ತಾರೆ.
ಕಾರ್ಯಾಗಾರದುದ್ದಕ್ಕೂ ನಡೆಯುವ ನಾಟಕ ನಿರ್ದೇಶನವನ್ನು ಮೈಸೂರಿನ ಮಹೇಶ್ ರಂಗಾಯಣ ತರಬೇತಿ ನೀಡಲಿದ್ದಾರೆಂದು ಕಾರ್ಯಾಗಾರದ ಸಂಚಾಲಕರಾದ ಡಾ. ಅಂದಯ್ಯ ಅರವಟಗಿಮಠ ಪ್ರಕಟನೆಯಲ್ಲಿ ತಿಳಿಸಿದ್ದಾರೆ.