ವಿಜಯಸಾಕ್ಷಿ ಸುದ್ದಿ, ಮುಂಡರಗಿ: ತಾಲೂಕಿನ ಕದಾಂಪುರ ಗ್ರಾಮದಲ್ಲಿ ಮಾದರಿ ಅಂಗನವಾಡಿ ಕೇಂದ್ರ-2 ರ ನವೀಕೃತ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಜರುಗಿತು.
Advertisement
ಮುಖ್ಯ ಅತಿಥಿಗಳಾಗಿ ಗದಗ ಜಿಲ್ಲೆಯ ಕೋಟಕ್ ಮಹೀಂದ್ರಾ ಬ್ಯಾಂಕ್‌ನ ಅಸೋಸಿಯೇಟ್ ವೈಸ್ ಪ್ರೆಸಿಡೆಂಟ್ ಈರಯ್ಯ ನಿರ್ವಾಣಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ, ಯುನೈಟೆಡ್ ವೇ ಬೆಂಗಳೂರು (UWBe) ಸಂಸ್ಥೆಯ ಭಾಗ್ಯ ಕುಮಾರ್, ಅನಿಲ್ ಕುಮಾರ್, ಮುಂಡರಗಿ ತಾಲೂಕಿನ ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಾದ ಎಂ.ಎ. ಈಸರನಾಳ ಉಪಸ್ಥಿತರಿದ್ದರು.
ಗ್ರಾಮದ ಹಿರಿಯರಾದ ರಾಮನಗೌಡ್ರು, ಗ್ರಾಮ ಪಂಚಾಯಿತಿ ಸದಸ್ಯರಾದ ಶಿವು ಬಾದಾಮಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿರುವ ಈ 15 ಮಾದರಿ ಅಂಗನವಾಡಿ ಕೇಂದ್ರಗಳನ್ನು ಹೈಟೆಕ್ ಅಂಗನವಾಡಿ ಕೇಂದ್ರಗಳನ್ನಾಗಿ ಮಾಡಿರುವ ಸಂಸ್ಥೆಯವರಿಗೆ ಅಭಿನಂದನೆ ಸಲ್ಲಿಸಿದರು.