ಕಲಿಕಾ ಹಂತದಲ್ಲಿ ಪ್ರಯತ್ನಶೀಲರಾಗಿ :ಮುಪ್ಪಿನ ಬಸವಲಿಂಗ ಸ್ವಾಮೀಜಿ

0
Inauguration of Social Activities at Annadaneshwar Undergraduate College
Spread the love

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಉತ್ತಮ ಸಾಧನೆ ಹಾಗೂ ಆದರ್ಶ ಬದುಕು ಸಾಗಿಸುವ ಕನಸನ್ನು ಕಾಣುವ ಮೂಲಕ ವಿದ್ಯಾರ್ಥಿಗಳು ಉನ್ನತ ಸಾಧನೆಗಳನ್ನು ಮಾಡಬೇಕು ಎಂದು ನರೇಗಲ್ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ಅಧ್ಯಕ್ಷರಾದ ಮುಪ್ಪಿನ ಬಸವಲಿಂಗ ಸ್ವಾಮೀಜಿ ಹೇಳಿದರು.

Advertisement

ಸ್ಥಳೀಯ ಅನ್ನದಾನೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದ ಪ್ರಸಕ್ತ ಸಾಲಿನ ವಿವಿಧ ಸಾಂಘಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದ ಸಾನ್ನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು.

ವಿದ್ಯಾರ್ಥಿ ಜೀವನದಲ್ಲಿ ಚಂಚಲತೆಯನ್ನು ತೊಡೆದು ಶಿಕ್ಷಣಕ್ಕೆ ಮಹತ್ವ ನೀಡಿಬೇಕು. ಯಾವುದೇ ಆಕರ್ಷಣೆಗೆ ಒಳಗಾಗದೆ ನಿರಂತರ ಅಧ್ಯಯನದಲ್ಲಿ ತೊಡಗಬೇಕು. ಕಲಿಕಾ ಹಂತದಲ್ಲಿ ಹಿಂದುಳಿಯದೆ ಪ್ರಯತ್ನಶೀಲರಾಗಿರಬೇಕು. ಭೂಮಿಯ ಮೇಲೆ ತಮ್ಮದೇ ಆದ ಸಾಧನೆಯ ಹೆಜ್ಜೆ ಗುರುತುಗಳನ್ನು ಬಿಟ್ಟು ಹೋಗಬೇಕು ಎಂದ ಅವರು, ನಮ್ಮ ಮಠದ ಹಿರಿಯ ಗುರುಗಳು ಜೋಳಿಗೆ ಹಾಕಿ ಗ್ರಾಮೀಣ ಭಾಗದ ಬಡ ಪ್ರತಿಭಾ ಸಂಪನ್ನ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದ್ದಾರೆ. ಕಾಲಕ್ಕೆ ತಕ್ಕಂತೆ ಕಡಿಮೆ ಶುಲ್ಕದಲ್ಲಿ ಉತ್ತಮ ಶಿಕ್ಷಣ ನೀಡಲಾಗುತ್ತಿದೆ ಎಂದರು.

ಕಳೆದ ಸಾಲಿನಲ್ಲಿ ದ್ವಿತೀಯ ಪಿಯು ಫಲಿತಾಂಶದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು, ಶೇ 100ರಷ್ಟು ಫಲಿತಾಂಶ ನೀಡಿದ ಉಪನ್ಯಾಸಕರನ್ನು ಹಾಗೂ ರೋಣ ಅಗ್ನಿಶಾಮಕ ದಳದ ಠಾಣಾಧಿಕಾರಿ ಮಂಜುನಾಥ ಮೆಲ್ಮನಿಯವರನ್ನು ಸನ್ಮಾನಿಸಲಾಯಿತು.

ಪಿಯು ಕಾಲೇಜಿನ ಚೇರಮನ್ ವಿ.ವಿ. ವಸ್ತçದ, ಪ್ರಾಚಾರ್ಯ ವಸಂತರಾವ್ ಗಾರಗಿ, ಮಂಜುನಾಥ ಮೆಲ್ಮನಿ, ಎನ್.ಆರ್. ಗೌಡರ, ಎಸ್.ಎಸ್. ಪಟ್ಟೇದ, ಸದಾಶಿವ ಕರಡಿ, ಪಿ.ಎನ್. ಚವಡಿ ಸೇರಿ ಇತರರು ಇದ್ದರು.

ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ (ಪಿಯು) ಉಪನಿರ್ದೇಶಕ ಜಿ.ಎನ್. ಕುರ್ತಕೋಟಿ ಮಾತನಾಡಿ, ದ್ವಿತೀಯ ಪಿಯು ಫಲಿತಾಂಶದಲ್ಲಿ ಜಿಲ್ಲೆ ಕೊನೆಯ ಸ್ಥಾನಕ್ಕೆ ಕುಸಿದಾಗ ಅನ್ನದಾನೇಶ್ವರ ಶಿಕ್ಷಣ ಸಂಸ್ಥೆಯ ನರೇಗಲ್-ಗಜೇಂದ್ರಗಡ ಕಾಲೇಜುಗಳಲ್ಲಿನ ಉತ್ತಮ ಫಲಿತಾಂಶವು ಜಿಲ್ಲೆಯ ಹಿರಿಮೆಯನ್ನು ಎತ್ತಿ ಹಿಡಿದಿವೆ ಎಂದರು.

 


Spread the love

LEAVE A REPLY

Please enter your comment!
Please enter your name here