ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳವೆಂದೇ ಪ್ರಖ್ಯಾತಗೊಂಡಿರುವ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದಲ್ಲಿ ಅತೀ ಹೆಚ್ಚು ಜನರು ಸೇರುವುದು ಜಾತ್ರೆಯ ಬಹುಮುಖ್ಯ ವಿಶೇಷತೆಯಾಗಿದೆ. ಜಾತ್ರೆಯ ಎಲ್ಲ ಧಾರ್ಮಿಕ, ಸಂಪ್ರದಾಯಿಕ ಹಾಗೂ ಸಮಾಜಿಕ ಕಾರ್ಯಕ್ರಮವನ್ನು ಜನರಿಗೆ ತಲುಪಿಸುವುವಲ್ಲಿ ಮಾಧ್ಯಮಗಳ ಪಾತ್ರ ಬಹಳ ದೊಡ್ಡದು ಎಂದು ಕೊಪ್ಪಳ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಜಿ.ಸುರೇಶ ಅಭಿಪ್ರಾಯಪಟ್ಟರು.
ನಗರರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಶುಕ್ರವಾರ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ-2025ರ ಮಾಧ್ಯಮ ಕೇಂದ್ರವನ್ನು ಉಧ್ಘಾಟಿಸಿ ಮಾತನಾಡಿದ ಅವರು, ಶ್ರೀ ಗವಿಸಿದ್ಧೇಶ್ವರ ಜಾತ್ರೆ ಉತ್ತರ ಕರ್ನಾಟಕದಲ್ಲಿ ಅಷ್ಟೇ ಅಲ್ಲದೆ ದೇಶ-ವಿದೇಶಗಳಲ್ಲಿ ಪ್ರಖ್ಯಾತಿಯನ್ನು ಪಡೆದಿದೆ. ಜಾತ್ರಾ ಸಮಯದಲ್ಲಿ ಜರಗುವ ವಿವಿಧ ಕಾರ್ಯಕ್ರಮಗಳ ಮಾಹಿತಿ ಜನರಿಗೆ ತಲುಪಿಸುವ ಜವಾಬ್ದಾರಿ ಮಾಧ್ಯಮದವರದ್ದಾಗಿದೆ. ಈ ಅಳಿಲು ಸೇವೆಯ ಮೂಲಕ ನಾವೆಲ್ಲರೂ ಶ್ರೀ ಗವಿಸಿದ್ಧೇಶ್ವರ ಕೃಪೆಗೆ ಪಾತ್ರರಾಗೋಣ ಎಂದರು.
ಮಹಾವಿದ್ಯಾಲಯದ ಪಾಚಾರ್ಯ ಡಾ. ಚನ್ನಬಸವ ಮಾತನಾಡಿದರು. ವಿವಿಧ ಪತ್ರಿಕಾ ಮತ್ತು ದೂರದರ್ಶನ ಮಾಧ್ಯಮದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಗಂಗಾಧರ ಸೊಪ್ಪಿಮಠ ಸ್ವಾಗತಿಸಿ, ನಿರೂಪಿಸಿದರು.