ಆಂಧ್ರ:- ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಆಂದ್ರಪ್ರದೇಶ ಸರ್ಕಾರ ಜನತೆಗೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
ಭಾರತದಲ್ಲಿ ಕೋವಿಡ್ ಪ್ರಕರಣಗಳು 257ಕ್ಕೆ ಏರಿದ್ದರೂ ಆತಂಕ ಪಡುವ ಅಗತ್ಯವಿಲ್ಲ. ಇದರ ನಡುವೆ ದಕ್ಷಿಣದ ರಾಜ್ಯಗಳಾದ ಮಹರಾಷ್ಟ್ರ, ಕೇರಳ ಮತ್ತು ತಮಿಳು ನಾಡಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಶೇಕಡವಾರು ಹೆಚ್ಚಾಗುತ್ತಿವೆ. ಇದರಿಂದ ಎಚ್ಚೆತ್ತಿರುವ ಆಂದ್ರ ಸರ್ಕಾರ ಮಾಸ್ಕ್ ಕಡ್ಡಾಯಗೊಳಿಸಿದೆ.
ಆಂಧ್ರ ಪ್ರದೇಶದಲ್ಲಿ ನಿನ್ನೆ ಒಂದೇ ದಿನ ಕೋವಿಡ್ 19 ಪಾಸಿಟಿವ್ ಕೇಸ್ ದಾಖಲಾಗಿದೆ. ಗುಜರಾತ್‌ನಲ್ಲೂ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ನೆರೆ ರಾಜ್ಯ ಕೇರಳ ಒಂದರಲ್ಲೇ 186 ಕೇಸ್ ಇದ್ದು, 95 ಸಕ್ರಿಯ ಪ್ರಕರಣಗಳು ಇವೆ. ಕಳೆದ ಕೆಲ ವರ್ಷಗಳಿಂದ ಮರೆಯಾಗಿದ್ದ ಮಹಾಮಾರಿ ಮತ್ತೆ ವಕ್ಕರಿಸಿತ ಎಂಬ ಬಗ್ಗೆ ಅನುಮಾನಗಳು ಆರಂಭವಾಗಿದ್ದು. ಕೇಂದ್ರ ಆರೋಗ್ಯ ಇಲಾಖೆ ಹೆಚ್ಚು ಆತಂಕಪಡುವ ಅಗತ್ಯವಿಲ್ಲ ಎಂದು ವರದಿ ನೀಡಿದೆ.