HomeBengaluru Newsರಾಜ್ಯ ಸರ್ಕಾರದಿಂದ ಮುಖ್ಯ ಘೋಷಣೆ

ರಾಜ್ಯ ಸರ್ಕಾರದಿಂದ ಮುಖ್ಯ ಘೋಷಣೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಬೆಂಗಳೂರು : IIT/IIM/IISC /NIT ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು, ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಿಯುಸಿ ಪರೀಕ್ಷೆಯಲ್ಲಿ ಶೇ.95ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್‌ಮೆಂಟ್ ಕೋಟಾದಡಿ ಎಂಬಿಬಿಎಸ್ ಕೋರ್ಸ್ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂಪಾಯಿಗಳ ಶುಲ್ಕ ಧನವನ್ನು ಒದಗಿಸಲು ಸರ್ಕಾರ ತೀರ್ಮಾನಿಸಿದೆ.

ಎಂಬಿಬಿಎಸ್ ಪದವಿಯನ್ನು ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ ಶೇ.60ಕ್ಕೂ ಹೆಚ್ಚಿನ ಅಂಕಗಗಳನ್ನು ಪಡೆದು ಉತ್ತೀರ್ಣರಾದರೆ ಅವರಿಗೆ ಅವರಿಗೆ ಮತ್ತೆ 25 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ನೀಡಲಾಗುವುದು. ಶಿಕ್ಷಣವೇ ಸಮಾಜವನ್ನು ಬದಲಿಸುವ ಕೀಲಿಕೈ ಎಂಬ ಅಂಶವನ್ನು ಮನಗಂಡು ಈ ಮಹತ್ವದ ಘೋಷಣೆಯನ್ನು ಸರ್ಕಾರ ಮಾಡಿದ್ದು, ಇದರಿಂದ ಉನ್ನತ ಶಿಕ್ಷಣ ಮಾಡಬೇಕೆಂಬ ವಿದ್ಯಾರ್ಥಿಗಳ ಕನಸು ನನಸಾಗಲಿದೆ.

ಐಐಟಿ, ಐಐಎಂನಂತಹ ಶಿಕ್ಷಣ ಸಂಸ್ಥೆಗಳಲ್ಲಿ ಓದುವಂತಹ ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳು ದೇಶ ನಿರ್ಮಾಣದಲ್ಲಿ ಸಕ್ರಿಯವಾಗಿ ತೊಡಗಬೇಕು. ಆ ಮೂಲಕ ಸಮೃದ್ಧ ಮತ್ತು ಸಶಕ್ತ ರಾಷ್ಟçದ ನಿರ್ಮಾಣವಾಗಬೇಕು ಎಂದು ಸಚಿವರು ತಿಳಿಸಿದರು.

ಬಡತನದ ಬೇಗೆಗೆ ಸಿಲುಕಿ ಎಂಬಿಬಿಎಸ್ ಓದುವ ಬಯಕೆ ಇರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರಿ ಕೋಟಾದಡಿ ಸೀಟು ಸಿಗದೇ ಅವರು ಖಾಸಗೀ ಸಂಸ್ಥೆಗಳಲ್ಲಿ ಓದುತ್ತಿದ್ದರೆ, ಅಂತಹ ಪ್ರತಿಭಾವಂತ ಮಕ್ಕಳ ಶುಲ್ಕವನ್ನು ಸರ್ಕಾರ ಭರಿಸಲಿದ್ದು, ಇದಕ್ಕಾಗಿ ಆರಂಭಿಕವಾಗಿ 25 ಲಕ್ಷ ರೂಪಾಯಿಗಳನ್ನು ನೀಡುವ ನಿರ್ಧಾರವನ್ನು ತೆಗೆದುಕೊಂಡಿದೆ. ಈಗಾಗಲೇ ಪ್ರಬುದ್ಧ ಯೋಜನೆಯಡಿ ವಿದೇಶಿ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿರುವ ನಮ್ಮ ಸರ್ಕಾರವು ಇದೀಗ ಮಕ್ಕಳ ಉತ್ತಮ ಶಿಕ್ಷಣವನ್ನು ಗಮನದಲ್ಲಿಟುಕೊಂಡು ಮುಖ್ಯ ಘೋಷಣೆಯನ್ನು ಮಾಡಿದೆ.

ಹೀಗಾಗಿ ಬಾಬಾ ಸಾಹೇಬರ ಆಶಯದಂತೆ ನಮ್ಮೆಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಹೆಚ್ಚು ಆಸಕ್ತಿ ಹೊಂದಿ, ಶ್ರಮ ಹಾಕಿ ಓದಬೇಕೆಂದು ಸಚಿವರು ಆಶಯವನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img