ವಿಜಯಸಾಕ್ಷಿ ಸುದ್ದಿ, ಗದಗ : ಪ್ರತಿ ಲೀಟರ್ ಪೆಟ್ರೋಲ್‌ಗೆ 3 ರೂ ಹಾಗು ಡೀಸೆಲ್‌ಗೆ 3.50 ರೂ ಏರಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ಎಂದು ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ ಖಂಡಿಸಿದ್ದಾರೆ.
ಕೇಂದ್ರ ಸರ್ಕಾರ ಪೆಟ್ರೋಲ್ ಹಾಗು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಿದರೆ, ರಾಜ್ಯದ ಕಾಂಗ್ರೆಸ್ ಸರ್ಕಾರ ಬೆಲೆಯನ್ನು ಹೆಚ್ಚಿಗೆ ಮಾಡಿದೆ. ಜನರಿಗೆ ಬೇಡವಾದ ಬಿಟ್ಟಿ ಭಾಗ್ಯಗಳಿಂದ ಈಗಾಗಲೇ ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ರಾಜ್ಯ ಸರ್ಕಾರ ತಕ್ಷಣವೇ ಜಾರಿಗೆ ಬರುವ ಹಾಗೆ ಪೆಟ್ರೋಲ್, ಡೀಸೆಲ್ ದರವನ್ನು ಏರಿಸಿ ಜನರಿಗೆ ಗಾಯದ ಮೇಲೆ ಬರೆ ಎಳೆದಿದೆ. ಲೋಕಸಭಾ ಚುನಾವಣಾ ಮುಗಿದ ಕೂಡಲೇ ರಾಜ್ಯ ಸರ್ಕಾರ ತನ್ನ ಜನ ವಿರೋಧಿ ನೀತಿಯನ್ನು ಹೊರಹಾಕಿದೆ. ಇಂಧನ ಬೆಲೆ ಏರಿಕೆಯಿಂದ ಪ್ರತಿಯೊಂದು ವಸ್ತುವಿನ ಬೆಲೆ ಏರಿಕೆ ಆಗುತ್ತದೆ. ಇದರಿಂದ ಜನಸಾಮಾನ್ಯರ ಜೀವನ ಇನ್ನಷ್ಟು ಸಂಕಷ್ಟ ಎದುರಿಸುವಂತಾಗುತ್ತದೆ ಎಂದು ತೋಟಪ್ಪ(ರಾಜು) ಕುರುಡಗಿ ಪತ್ರಿಕಾ ಹೇಳಿಕೆಯಲ್ಲಿ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.