ಹೆಚ್ಚಿದ ತಾಪಮಾನ: ಬಿಸಿಲಿನ ಝಳಕ್ಕೆ ಹೈರಾಣಾದ ಬೆಳಗಾವಿ ಜನ!

0
Spread the love

ಬೆಳಗಾವಿ:- ಕಳೆದ ಬಾರಿಗಿಂತಲೂ ಈ ಬಾರಿ ತಾಪಮಾನ ಏರಿಕೆ ಆಗಿರುವ ಹಿನ್ನೆಲೆ ಉತ್ತರ ಕರ್ನಾಟಕದಲ್ಲಿ ಬಿರುಬಿಸಿಲಿನ ಆರ್ಭಟ ಜೋರಾಗಿದೆ. ಹೀಗಾಗಿ ಚಿಕ್ಕೋಡಿ ಭಾಗದ ಜನರು ಬಿಸಿಲಿನ ಝಳಕ್ಕೆ ಹೈರಾಣಾಗಿದ್ದಾರೆ.

Advertisement

ಬೆಳಗಾವಿ ಜಿಲ್ಲೆಯಲ್ಲಿ ಮಾರ್ಚ್ ಆರಂಭದಲ್ಲೇ ಜನರು ಬಿಸಿಲಿಗೆ ಹೈರಾಣಾಗಿದ್ದಾರೆ. ಸಾಮಾನ್ಯವಾಗಿ ಮಾರ್ಚ್ ಆರಂಭದಲ್ಲಿ ಕಾಣಿಸಿಕೊಳ್ಳುತ್ತಿದ್ದ 32 ಡಿಗ್ರಿ ಸೆಲ್ಸಿಯಸ್ ತಾಪಮಾನ, ಈ ಬಾರಿ 36 ರಿಂದ 38 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ದಾಖಲಾಗಿದೆ.

2020ರಿಂದ ಇಲ್ಲಿಯವರೆಗೆ ಇದ್ದ ತಾಪಮಾನವನ್ನು ಈ ಬಾರಿ ಮಾರ್ಚ್ ಆರಂಭದಲ್ಲೇ ಹಿಂದಿಕ್ಕಿದೆ. ಮಾರ್ಚ್ ತಿಂಗಳ ಹಿಂದಿನ ವರ್ಷಗಳ ಗರಿಷ್ಠ ತಾಪಮಾನ ಹೋಲಿಕೆ ನೋಡುವುದಾದರೆ, 2020 ಮಾರ್ಚ್‌ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿತ್ತು. 2021ರಲ್ಲಿ 30.7, 2022ರಲ್ಲಿ 32.5, 2023ರಲ್ಲಿ 33.8, 2024ನಲ್ಲಿ 34.5, 2025 ಮಾರ್ಚ್‌ನಲ್ಲಿ 37.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ಚಿಕ್ಕೋಡಿಯಲ್ಲಿ ಅವಧಿಗೆ ಮುನ್ನವೇ ಬಿಸಿಲಿನ ಝಳಕ್ಕೆ ಜನರು ತುತ್ತಾಗುತ್ತಿದ್ದಾರೆ. ಜನರು ಮಕ್ಕಳೊಂದಿಗೆ ಮನೆಯಿಂದ ಹೊರ ಬರಲು ಯೋಚನೆ ಮಾಡುವಂತಾಗಿದೆ.


Spread the love

LEAVE A REPLY

Please enter your comment!
Please enter your name here