IND vs AUS: ಆಸ್ಟ್ರೇಲಿಯಾ 181ಕ್ಕೆ ಆಲೌಟ್‌: ಭಾರತಕ್ಕೆ 4 ರನ್‌ ಮುನ್ನಡೆ

0
Spread the love

ಮೆಲ್ಬರ್ನ್‌: ಸಿಡ್ನಿಯಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 5ನೇ ಪಂದ್ಯದಲ್ಲಿ ಭಾರತೀಯ ವೇಗಿಗಳು ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನ 181 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ.

Advertisement

ಭಾರತದ ವೇಗಿಗಳಾದ ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್ ಮತ್ತು ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಟೀ ಸ್ಟ್ರೋಕ್‌ನಲ್ಲಿ ಭಾರತವು ಮೇಲುಗೈ ಸಾಧಿಸಲು ಸಹಾಯ ಮಾಡಿದರು.

ಸಿಡ್ನಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ದಿನ 185 ರನ್‌ ಗಳಿಸಿ ಆಲೌಟ್‌ ಆಗಿತ್ತು. ನಂತರ ಬ್ಯಾಟ್‌ ಆರಂಭಿಸಿದ್ದ ಆಸ್ಟ್ರೇಲಿಯಾ 1 ವಿಕೆಟ್‌ ನಷ್ಟಕ್ಕೆ 9 ರನ್‌ ಗಳಿಸಿತ್ತು. ಎರಡನೇ ದಿನ ಭಾರತದ ವೇಗಿಗಳು ನಡೆಸಿದ ದಾಳಿಗೆ ಆಸಿಸ್‌ ಬ್ಯಾಟರ್‌ಗಳು ತತ್ತರಿಸಿದರು. 181 ರನ್‌ಗಳಿಗೆ ಆಲೌಟ್‌ ಆಗಿ ಮುಗ್ಗರಿಸಿದರು.

ಮೊಹಮ್ಮದ್‌ ಸಿರಾಜ್‌ ಮತ್ತು ಪ್ರಸಿದ್ಧ ಕೃಷ್ಣ ತಲಾ 3 ವಿಕೆಟ್‌ ಕಿತ್ತು ಮಿಂಚಿದರು. ನಿತೀಶ್‌ ಕುಮಾರ್‌ ರೆಡ್ಡಿ 2 ವಿಕೆಟ್‌ ಕಬಳಿಸಿದರು. ಸದ್ಯ ಇನ್ನಿಂಗ್ಸ್‌ ಆರಂಭಿಸಿರುವ ಭಾರತ, 24 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 128 ರನ್‌ಗಳಿಸಿದೆ.


Spread the love

LEAVE A REPLY

Please enter your comment!
Please enter your name here