ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025 ರ ಸೆಮಿಫೈನಲ್‌ನಲ್ಲಿ ಭಾರತ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ನಿರ್ಧರಿಸಿದೆ. ಸತತ 15 ಪಂದ್ಯಗಳಲ್ಲಿ ಸೋಲರಿಯದ ಆಸ್ಟ್ರೇಲಿಯಾ ವಿರುದ್ಧ ಗೆಲ್ಲಲು ಭಾರತ ಅಸಾಧಾರಣ ಪ್ರದರ್ಶನ ನೀಡಬೇಕಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ದುಕೊಂಡಿದ್ದು, ಭಾರತ ತಂಡದಲ್ಲಿ ಮೂರು ಪ್ರಮುಖ ಬದಲಾವಣೆ ಮಾಡಲಾಗಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಹೀಗಾಗಿ ಟಾಸ್ ಸೋತ ಹರ್ಮನ್‌ಪ್ರೀತ್ ಪಡೆ ಮೊದಲ ಬೌಲಿಂಗ್ ಮಾಡಲಿದೆ. ಆಸ್ಟ್ರೇಲಿಯಾ ತಂಡದಲ್ಲಿ 1 ಬದಲಾವಣೆ ಮಾಡಲಾಗಿದ್ದು ಜಾರ್ಜಿಯಾ ವೇರ್‌ಹ್ಯಾಮ್ ಬದಲಿಗೆ ಸೋಫಿ ಮೊಲಿನಾಕ್ಸ್ ತಂಡಕ್ಕೆ ಮರಳಿದ್ದಾರೆ.
ಇತ್ತ ನಿರೀಕ್ಷೆಯಂತೆ ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 3 ಬದಲಾವಣೆ ಮಾಡಲಾಗಿದೆ. ಆರಂಭಿಕ ಆಟಗಾರ್ತಿ ಪ್ರತೀಕಾ ರಾವಲ್ ಬದಲಿಗೆ ಶಫಾಲಿ ವರ್ಮಾಗೆ ಪ್ಲೇಯಿಂಗ್ 11ನಲ್ಲಿ ಅವಕಾಶ ನೀಡಲಾಗಿದೆ. ಹಾಗೆಯೇ ಕಳೆದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ರಿಚಾ ಘೋಷ್ ಮತ್ತು ಕ್ರಾಂತಿ ಗೌಡ್ ಈ ಪಂದ್ಯದಲ್ಲಿ ಆಡುತ್ತಿದ್ದಾರೆ.
ಭಾರತ ತಂಡ: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಅಮನ್‌ಜೋತ್ ಕೌರ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್‌ಕೀಪರ್), ರಾಧಾ ಯಾದವ್, ಕ್ರಾಂತಿ ಗೌಡ್, ಶ್ರೀ ಚರಣಿ, ರೇಣುಕಾ ಸಿಂಗ್ ಠಾಕೂರ್.
ಆಸ್ಟ್ರೇಲಿಯಾ ತಂಡ: ಫೋಬೆ ಲಿಚ್‌ಫೀಲ್ಡ್, ಅಲಿಸಾ ಹೀಲಿ(ನಾಯಕಿ, ವಿಕೆಟ್ ಕೀಪರ್), ಎಲ್ಲಿಸ್ ಪೆರ್ರಿ, ಬೆತ್ ಮೂನಿ, ಅನ್ನಾಬೆಲ್ ಸದರ್ಲ್ಯಾಂಡ್, ಆಶ್ಲೀ ಗಾರ್ಡ್ನರ್, ತಹ್ಲಿಯಾ ಮೆಕ್‌ಗ್ರಾತ್, ಅಲಾನಾ ಕಿಂಗ್, ಕಿಮ್ ಗಾರ್ತ್, ಮೇಗನ್ ಶುಟ್, ಸೋಫಿ ಮೊಲಿನಿಯಕ್ಸ್.


