HomeSports NewsIND V/s AUS: ಕಪ್ಪು ಪಟ್ಟಿ ಧರಿಸಿ ಅಖಾಡಕ್ಕಿಳಿದ ಟೀಂ ಇಂಡಿಯಾ! ಕಾರಣ?

IND V/s AUS: ಕಪ್ಪು ಪಟ್ಟಿ ಧರಿಸಿ ಅಖಾಡಕ್ಕಿಳಿದ ಟೀಂ ಇಂಡಿಯಾ! ಕಾರಣ?

For Dai;y Updates Join Our whatsapp Group

Spread the love

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಎರಡನೇ ದಿನದ ಆಟ ಇಂದು ಮೆಲ್ಬೋರ್ನ್‌ನಲ್ಲಿ ನಡೆಯುತ್ತಿದ್ದು, ಟೀಮ್ ಇಂಡಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಅಖಾಡಕ್ಕಿಳಿದಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಟೀಮ್ ಇಂಡಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಅಖಾಡಕ್ಕಿಳಿದಿದ್ದಾರೆ.

ಡಾ. ಮನಮೋಹನ್ ಸಿಂಗ್ ನಿಧನದಿಂದ ದೇಶದಾದ್ಯಂತ ಶೋಕ ಮಡುಗಟ್ಟಿದ್ದು, ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡುತ್ತಿರುವ ಟೀಂ ಇಂಡಿಯಾ ಎರಡನೇ ದಿನದಾಟದಲ್ಲಿ ಮನಮೋಹನ್ ಸಿಂಗ್ ಅವರಿಗೆ ಗೌರವ ಸಲ್ಲಿಸಿ ಕೈಗೆ ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದ್ದಾರೆ.

2004 ರಿಂದ 2014 ರವರೆಗೆ ಭಾರತದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ನಂತರ ಸುದೀರ್ಘ ಅವಧಿಗೆ ಈ ಹುದ್ದೆಯನ್ನು ಅಲಂಕರಿಸಿದ್ದ ಭಾರತದ ನಾಲ್ಕನೇ ಪ್ರಧಾನಿ ಎನಿಸಿಕೊಂಡಿದ್ದರು.

ಇನ್ನು ಅಗಲಿದ ಚೇತನಕ್ಕೆ ಟೀಂ ಇಂಡಿಯಾದ ಹಲವು ಮಾಜಿ ಆಟಗಾರರು ಸಂತಾಪ ಸೂಚಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿರುವ ವಿರೇಂದ್ರ ಸೆಹ್ವಾಗ್, ‘ನಮ್ಮ ಮಾಜಿ ಪ್ರಧಾನಿ ಶ್ರೀ ಮನಮೋಹನ್ ಸಿಂಗ್ ಅವರ ನಿಧನಕ್ಕೆ ನನ್ನ ಹೃತ್ಪೂರ್ವಕ ಸಂತಾಪಗಳು. ಓಂ ಶಾಂತಿ’ ಎಂದು ಬರೆದುಕೊಂಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!