HomeSports NewsIND vs SA 2nd Test: ದ. ಆಫ್ರಿಕಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು!

IND vs SA 2nd Test: ದ. ಆಫ್ರಿಕಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು!

For Dai;y Updates Join Our whatsapp Group

Spread the love

ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆದ 2ನೇ ಟೆಸ್ಟ್‌ನಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾದ ವಿರುದ್ಧ 408 ರನ್‌ಗಳ ಅಂತರದಿಂದ ಸೋಲು ಅನುಭವಿಸಿತು. ಈ ಸೋಲಿನಿಂದ ಭಾರತ ತಂಡ ತನ್ನ ಇತಿಹಾಸದಲ್ಲೇ ಅತ್ಯಂತ ದೊಡ್ಡ ಅಂತರದ ಸೋಲು ಅನುಭವಿಸಿದೆ.

ಟೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡ ಕ್ಲೀನ್‌ ಸ್ವೀಪ್‌ನೊಂದಿಗೆ ಭಾರತದ ನೆಲದಲ್ಲಿ ಸರಣಿ ಕೈವಶ ಮಾಡಿಕೊಂಡಿದೆ.  2 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ ಎರಡೂ ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. 549 ರನ್‌ಗಳ ಗುರಿ ಎದುರಿಸಿದ ಭಾರತ ತಂಡ 4ನೇ ದಿನದ ಅಂತ್ಯಕ್ಕೆ 27 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿ ಇತ್ತು. ಅಂತಿಮವಾಗಿ, ಭಾರತ 140 ರನ್‌ಗಳಿಗೆ ಆಲೌಟ್‌ ಆಗಿದ್ದು, ದಕ್ಷಿಣ ಆಫ್ರಿಕಾ 408 ರನ್‌ಗಳ ಭಾರೀ ಜಯ ಸಾಧಿಸಿತು.

ಈ ವರ್ಷ ನ್ಯೂಜಿಲೆಂಡ್ ವಿರುದ್ಧ ನಡೆದ ಟೆಸ್ಟ್‌ ಸರಣಿಯಲ್ಲಿ ಭಾರತ 0-3 ಅಂತರದಲ್ಲಿ ಸೋಲು ಕಂಡಿತ್ತು. ಆದರೆ, ಆ ಸಂದರ್ಭದಲ್ಲಿ ರನ್‌ ಅಂತರ 408 ರನ್‌ಗಳಷ್ಟು ದೊಡ್ಡದಾಗಿರಲಿಲ್ಲ.

ಕೊನೆಯ ದಿನದಲ್ಲಿ 508 ರನ್‌ಗಳ ಅಗತ್ಯವನ್ನು ಎದುರಿಸಿದ ಭಾರತ ತಂಡ ಪಂದ್ಯವನ್ನು ಡ್ರಾ ಮಾಡುವತ್ತ ಗಮನ ಹರಿಸಿದ್ದರೂ, ಆಫ್ರಿಕಾ ಬಲಿಷ್ಠ ಬೌಲಿಂಗ್‌ನಲ್ಲಿ ವಿರೋಧಿಯನ್ನು 140 ರನ್‌ಗಳಲ್ಲಿ ಕಟ್ಟಿಹಾಕಲು ಯಶಸ್ವಿಯಾಯಿತು. ಈ ಹಂತದಲ್ಲಿ ಕಣಕ್ಕಿಳಿದ ನಾಯಕ ರಿಷಭ್ ಪಂತ್ 13 ರನ್​ ಬಾರಿಸಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು.

ಇದಾಗ್ಯೂ ಏಕಾಂಗಿ ಹೋರಾಟ ಮುಂದುವರೆಸಿದ ರವೀಂದ್ರ ಜಡೇಜಾ 54 ರನ್ ಬಾರಿಸಿದರು. ಆದರೆ ಅಂತಿಮವಾಗಿ 140 ರನ್​ಗಳಿಗೆ ಆಲೌಟ್ ಆಗುವ ಮೂಲಕ ಟೀಮ್ ಇಂಡಿಯಾ 408 ರನ್​​ಗಳಿಂದ ಸೋಲೊಪ್ಪಿಕೊಂಡಿದೆ. ಈ ಗೆಲುವಿನೊಂದಿಗೆ ಸೌತ್ ಆಫ್ರಿಕಾ ತಂಡ 26 ವರ್ಷಗಳ ಬಳಿಕ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದುಕೊಂಡಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!