ಇಂದಿನಿಂದ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟಿ20 ಸರಣಿ ಶುರುವಾಗಲಿದೆ.
ಸರಣಿಯ ಮೊದಲ ಪಂದ್ಯ ಕಟಕ್ನ ಬಾರಾಬತಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ಟಿ20ಯಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಹೀಗಾಗಿ ತಮ್ಮ ಗೆಲುವಿನ ಓಟವನ್ನು ಮುಂದುವರಿಸುವ ಇರಾದೆಯಲ್ಲಿರುವ ಟೀಂ ಇಂಡಿಯಾಕ್ಕೆ, ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸುವ ಸವಾಲು ಎದುರಾಗಿದೆ. ಇತ್ತ ದಕ್ಷಿಣ ಆಫ್ರಿಕಾ ಕೂಡ ಏಕದಿನ ಸರಣಿಯ ಸೋಲಿಗೆ ಟಿ20 ಸರಣಿಯಲ್ಲಿ ಸೇಡು ತೀರಿಸಿಕೊಳ್ಳುವ ಯೋಜನೆಯಲ್ಲಿದೆ.
ಈ ಪಂದ್ಯಕ್ಕಾಗಿ ಟೀಂ ಇಂಡಿಯಾದ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದು ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಏಕೆಂದರೆ ಪ್ರತಿಯೊಂದು ಕ್ರಮಾಂಕಕ್ಕೂ ಇಬ್ಬಿಬ್ಬರು ಆಟಗಾರರು ಸ್ಪರ್ಧೆಯಲಿದ್ದಾರೆ. ಅಲ್ಲದೆ ಕೆಲವರು ಇಂಜುರಿಯಿಂದ ತಂಡಕ್ಕೆ ವಾಪಸ್ಸಾಗಿದ್ದು, ಅವರಿಗೆ ಸ್ಥಾನ ಕೊಡುವ ಸಲುವಾಗಿ ಕೆಲವರು ತಮ್ಮ ಸ್ಥಾನವನ್ನು ತ್ಯಾಗ ಮಾಡಬೇಕಾಗಿದೆ.
ಭಾರತದ ಸಂಭಾವ್ಯ ಪ್ಲೇಯಿಂಗ್ XI: ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.



