HomeSports NewsT20 World Cup: ಸೆಮಿಫೈನಲ್ ಟಿಕೆಟ್ʼಗೆ ಭಾರತ-ಆಸ್ಟ್ರೇಲಿಯಾ ಕಾದಾಟ: ಪಂದ್ಯ ಯಾವಾಗ, ಎಲ್ಲಿ? ಇಲ್ಲಿದೆ ಸಂಪೂರ್ಣ...

T20 World Cup: ಸೆಮಿಫೈನಲ್ ಟಿಕೆಟ್ʼಗೆ ಭಾರತ-ಆಸ್ಟ್ರೇಲಿಯಾ ಕಾದಾಟ: ಪಂದ್ಯ ಯಾವಾಗ, ಎಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

For Dai;y Updates Join Our whatsapp Group

ಲಂಡನ್: 2026ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್ ಪ್ರವೇಶದ ದೃಷ್ಟಿಯಿಂದ ಭಾರತ ಮಹಿಳಾ ತಂಡಕ್ಕೆ ಇಂದು ಅಗ್ನಿಪರೀಕ್ಷೆ ಎದುರಾಗಿದೆ. ಲೀಗ್ ಹಂತದ ತನ್ನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದ್ದು, ಈ ಪಂದ್ಯ ಎರಡೂ ತಂಡಗಳಿಗೆ ಮಹತ್ವದ್ದಾಗಿದೆ.

ಭಾರತ ತಂಡ ಇದುವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರು ಗೆಲುವು ಹಾಗೂ ಒಂದು ಸೋಲಿನೊಂದಿಗೆ ಆರು ಅಂಕಗಳನ್ನು ಗಳಿಸಿ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಮತ್ತೊಂದೆಡೆ ಆಸ್ಟ್ರೇಲಿಯಾ ಆಡಿರುವ ಎಲ್ಲಾ ನಾಲ್ಕು ಪಂದ್ಯಗಳಲ್ಲೂ ಗೆದ್ದು ಎಂಟು ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದೆ.

ಸೆಮಿಫೈನಲ್ ಪ್ರವೇಶದ ಲೆಕ್ಕಾಚಾರದ ಪ್ರಕಾರ ಭಾರತಕ್ಕೆ ಈ ಪಂದ್ಯ ‘ಮಾಡು ಇಲ್ಲವೇ ಮಡಿ’ಯಂತಾಗಿದೆ. ಈಗಾಗಲೇ ಒಂದು ಸೋಲು ಕಂಡಿರುವ ಹರ್ಮನ್‌ಪ್ರೀತ್ ಕೌರ್ ಪಡೆ ಆಸ್ಟ್ರೇಲಿಯಾವನ್ನು ಮಣಿಸಿದರೆ ಮಾತ್ರ ಸೆಮಿಫೈನಲ್ ಪ್ರವೇಶದ ಅವಕಾಶ ಜೀವಂತವಾಗಿರಲಿದೆ. ಸೋಲು ಕಂಡರೆ ಟೂರ್ನಿಯಿಂದ ಹೊರಬೀಳಬೇಕಾಗುತ್ತದೆ.

ಪಂದ್ಯ ಯಾವಾಗ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹಿಳಾ ಟಿ20 ವಿಶ್ವಕಪ್ ಪಂದ್ಯ ಇಂದು (ಜೂನ್ 28) ನಡೆಯಲಿದೆ.

ಪಂದ್ಯ ಎಲ್ಲಿ ನಡೆಯಲಿದೆ?

ಈ ಮಹತ್ವದ ಪಂದ್ಯ ಲಂಡನ್‌ನ ಐತಿಹಾಸಿಕ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

ಪಂದ್ಯ ಆರಂಭವಾಗುವ ಸಮಯ

ಉಭಯ ತಂಡಗಳ ನಡುವಿನ ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ನೇರ ಪ್ರಸಾರ ಎಲ್ಲಿದೆ?

ಭಾರತ-ಆಸ್ಟ್ರೇಲಿಯಾ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನೆಲ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

ಭಾರತ ತಂಡ

ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಭಾರತಿ ಫುಲ್ಮಾಲಿ, ದೀಪ್ತಿ ಶರ್ಮಾ, ರಿಚಾ ಘೋಷ್, ಶ್ರೀ ಚರಣಿ, ಯಾಸ್ತಿಕಾ ಭಾಟಿಯಾ, ನಂದನಿ ಶರ್ಮಾ, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್, ಕ್ರಾಂತಿ ಗೌಡ್, ಪ್ರೇಮಾ ರಾವತ್ ಹಾಗೂ ರಾಧಾ ಯಾದವ್.

ಆಸ್ಟ್ರೇಲಿಯಾ ತಂಡ

ಬೆತ್ ಮೂನಿ, ಜಾರ್ಜಿಯಾ ವೋಲ್, ಎಲಿಸ್ ಪೆರ್ರಿ, ಆಶ್ಲೀ ಗಾರ್ಡ್ನರ್, ಜಾರ್ಜಿಯಾ ವೇರ್‌ಹ್ಯಾಮ್, ನಿಕೋಲಾ ಕ್ಯಾರಿ, ಅನ್ನಾಬೆಲ್ ಸದರ್‌ಲ್ಯಾಂಡ್, ಸೋಫಿ ಮೊಲಿನಿಯಕ್ಸ್ (ನಾಯಕಿ), ಅಲಾನಾ ಕಿಂಗ್, ಕಿಮ್ ಗಾರ್ತ್, ಲೂಸಿ ಹ್ಯಾಮಿಲ್ಟನ್, ಫೋಬೆ ಲಿಚ್‌ಫೀಲ್ಡ್, ತಹ್ಲಿಯಾ ಮೆಕ್‌ಗ್ರಾತ್, ಗ್ರೇಸ್ ಹ್ಯಾರಿಸ್ ಹಾಗೂ ಮೇಗನ್ ಶುಟ್.

ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸಿ ಸೆಮಿಫೈನಲ್‌ಗೆ ಲಗ್ಗೆ ಇಡುವ ಗುರಿಯೊಂದಿಗೆ ಭಾರತ ತಂಡ ಕಣಕ್ಕಿಳಿಯಲಿದ್ದು, ಮಹಿಳಾ ವಿಶ್ವಕಪ್‌ನ ಅತ್ಯಂತ ರೋಚಕ ಪಂದ್ಯಗಳಲ್ಲಿ ಇದೂ ಒಂದಾಗುವ ನಿರೀಕ್ಷೆಯಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img