ಭಾರತ ಬೂಟಾಟಿಕೆಗೆ ನಾಲ್ಕು ಫ್ಲೈಟ್ ಮೇಲೆ ಕಳುಹಿಸಿದ್ದು ಬಿಟ್ಟರೆ ಏನೂ ಮಾಡಿಲ್ಲ: ಕೊತ್ತೂರು ಮಂಜುನಾಥ್

0
Spread the love

ಕೋಲಾರ: ಭಾರತ ಬೂಟಾಟಿಕೆಗೆ ನಾಲ್ಕು ಫ್ಲೈಟ್ ಮೇಲೆ ಕಳುಹಿಸಿದ್ದು ಬಿಟ್ಟರೆ ಏನೂ ಮಾಡಿಲ್ಲ ಎಂದು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಭಾರತ ಬೂಟಾಟಿಕೆಗೆ ನಾಲ್ಕು ಫ್ಲೈಟ್ ಮೇಲೆ ಕಳುಹಿಸಿದ್ದು ಬಿಟ್ಟರೆ ಏನೂ ಮಾಡಿಲ್ಲ. 26 ಜನ ಮಹಿಳೆಯರ ಅರಶಿನ ಕುಂಕುಮಕ್ಕೆ ಬೆಲೆ ಇಷ್ಟೆಯಾ ಎಂದು ಪ್ರಶ್ನಿಸಿದ್ದಾರೆ.

Advertisement

ಸಾಮಾನ್ಯ ಪ್ರಜೆಗಳ ಮೇಲೆ ಯುದ್ದ ಮಾಡುವುದಕ್ಕೆ ನಮ್ಮ ವಿರೋಧವಿದೆ. ಆದರೆ, ನಮ್ಮ ದೇಶದೊಳಗೆ ಬಂದು ಪತ್ನಿಯರ ಎದುರೇ ಪತಿಯರನ್ನು ಹೊಡೆದರೆ ಹೇಗೆ ಸಹಿಸುವುದು? ಆ ಹೆಣ್ಣು ಮಕ್ಕಳು ಗಟ್ಟಿಯಾಗಿರುವುದಕ್ಕೆ ಪರವಾಗಿಲ್ಲ.

ಇಲ್ಲಾ ಅಂದರೆ ಹಾರ್ಟ್ ಅಟ್ಯಾಕ್ ಆಗಿ ಸಾಯುತ್ತಿದ್ದರು. ಅಂತಹದಕ್ಕೆ ಪರಿಹಾರ ಇದಲ್ಲ. ಬೇರಿನಿಂದ ಕೊಂಬೆ ತನಕ ಎಲ್ಲವನ್ನೂ ಹೊಡೆಯಬೇಕು. ಈ ಬಾರಿ ಒಳ್ಳೆಯ ಅವಕಾಶ ಇತ್ತು, ಆದರೆ ಏನೂ ಮಾಡಿಲ್ಲ ಎಂಬುದು ಬೇಸರ ತಂದಿದೆ ಎಂದರು.

ಇನ್ನೂ ಭಾರತೀಯ ಸೇನೆಯ ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆ ಬಗ್ಗೆ ಕೊತ್ತೂರು ಮಂಜುನಾಥ್ ನೀಡಿರುವ ಹೇಳಿಕೆಗೆ ಈಗ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿದೆ.


Spread the love

LEAVE A REPLY

Please enter your comment!
Please enter your name here