ಭಾರತ ಯಾವುದೇ ಪರಮಾಣು ಬೆದರಿಕೆಗಳಿಗೆ ಹೆದರದ ದೇಶ: ಪ್ರಧಾನಿ ಮೋದಿ

0
Spread the love

ಮಧ್ಯಪ್ರದೇಶ: ಭಾರತ ಯಾವುದೇ ಪರಮಾಣು ಬೆದರಿಕೆಗಳಿಗೆ ಹೆದರದ ದೇಶ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಧ್ಯಪ್ರದೇಶದ ಧಾರ್‌ನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಇದು ಹೊಸ ಭಾರತ. ಈ ಭಾರತ ಯಾವುದೇ ಪರಮಾಣು ಬೆದರಿಕೆಗಳಿಗೆ ಹೆದರದ ದೇಶ.

Advertisement

ಇದು ಶತ್ರುಗಳ ಮನೆ ಬಾಗಿಲಿಗೆ ಹೋಗಿ ಉಗ್ರರನ್ನು ಸದೆಬಡಿಯುವ ದೇಶ ಎಂದು ಹೇಳಿದ್ದಾರೆ. ಭಾರತ ಮಾತೆಯ ಭದ್ರತೆಗೆ ರಾಷ್ಟ್ರವು ಅತ್ಯಂತ ಆದ್ಯತೆ ನೀಡುತ್ತದೆ. ಪಾಕಿಸ್ತಾನಿ ಭಯೋತ್ಪಾದಕರು ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದರು.

ನಾವು ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿ, ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಿದ್ದೇವೆ. ನಮ್ಮ ಕೆಚ್ಚೆದೆಯ ಸಶಸ್ತ್ರ ಪಡೆಗಳು ಕಣ್ಣು ಮಿಟುಕಿಸುವುದರೊಳಗೆ ಪಾಕಿಸ್ತಾನವನ್ನು ಮಂಡಿಯೂರಿ ನಿಲ್ಲಿಸಿದವು. ಇದು ನವ ಭಾರತ. ಇದು ಯಾರ ಪರಮಾಣು ಬೆದರಿಕೆಗಳಿಗೂ ಹೆದರುವುದಿಲ್ಲ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here