ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪಟ್ಟಣ ಸೇರಿದಂತೆ ಹೋಬಳಿಯಾದ್ಯಂತ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಶಾಲಾ-ಕಾಲೇಜು ಸೇರಿದಂತೆ ಬ್ಯಾಂಕ್, ಸರ್ಕಾರಿ ಕಛೇರಿ ಹಾಗೂ ಸಂಘ ಸಂಸ್ಥೆಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ಸ್ಥಳೀಯ ಪಟ್ಟಣ ಪಂಚಾಯಿತಿಯಲ್ಲಿ ನಡೆದ ಸಮಾರಂಭದಲ್ಲಿ ಪ.ಪಂ ಅಧ್ಯಕ್ಷ ಫಕೀರಪ್ಪ ಮಳ್ಳಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಇಂದು ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸುವ ದಿನವಾಗಿದೆ. ನಮಗೆ ದೊರೆತಿರುವ ಸ್ವಾತಂತ್ರ್ಯದಿಂದ ಭಾರತ ಹತ್ತು ಹಲವಾರು ಸಮಸ್ಯೆಗಳ ಮಧ್ಯೆಯೂ ಸ್ವಾವಲಂಬನೆಯತ್ತ ಹೆಜ್ಜೆ ಇಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಸಾರ್ವಜನಿಕ ಗ್ರಂಥಾಲಯದಲ್ಲಿ ಪ.ಪಂ ಉಪಾಧ್ಯಕ್ಷ ಕುಮಾರಸ್ವಾಮಿ ಕೋರಧಾನ್ಯಮಠ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತಾಂಬೆಯನ್ನು ಸ್ವತಂತ್ರಗೊಳಿಸಲು ಮಡಿದ ಅನೇಕ ಮಹನೀಯರು ತಮ್ಮ ವೈಯಕ್ತಿಕ ಜೀವನದ ಕಡೆಗೆ ಎಳ್ಳಷ್ಟೂ ಗಮನ ಹರಿಸಲಿಲ್ಲ. ದೇಶ ಮುಖ್ಯ ಎಂದುಕೊಂಡು ಹೋರಾಡಿ ಮಡಿದ ಮಹನೀಯರು ನಮಗೆ ಆದರ್ಶರಾಗಿದ್ದಾರೆ. ಅವರ ಆದರ್ಶಗಳನ್ನು ಜೀವನದಲ್ಲಿ ಕಿಂಚಿತ್ತಾದರೂ ಅಳವಡಿಸಿಕೊಳ್ಳಲು ನಾವಿಂದು ಪ್ರತಿಜ್ಞೆ ಮಾಡೋಣ ಎಂದರು. ಸ್ಥಾಯಿ ಸಮಿತಿ ಚೇರಮನ್ ಮುತ್ತಪ್ಪ ನೂಲ್ಕಿ, ಶ್ರೀಶೈಲಪ್ಪ ಬಂಡಿಹಾಳ, ವೀರಪ್ಪ ಜೋಗಿ, ಮಲ್ಲಿಕಾರ್ಜುನಗೌಡ ಭೂಮನಗೌಡ್ರ, ಜ್ಯೋತಿ ಪಾಯಪ್ಪಗೌಡ್ರ, ಫಕೀರಪ್ಪ ಬಮಲಾಪೂರ, ರಾಚಯ್ಯ ಮಾಲಗಿತ್ತಿಮಠ, ದಾವೂದಲಿ ಕುದರಿ, ಪ.ಪಂ ಮುಖ್ಯಾಧಿಕಾರಿ ಮಹೇಶ ನಿಡಶೇಶಿ, ಆರೀಫ್ ಮಿರ್ಜಾ, ಪ.ಪಂ ಸದಸ್ಯರು, ಸಿಬ್ಬಂದಿ ಹಾಗೂ ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಿಬ್ಬಂದಿಗಳಿದ್ದರು.
ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೃಷಿ ಅಧಿಕಾರಿ ಬಸವರಾಜ ಗದಗಿನ ಧ್ವಜಾರೋಹಣ ನೆರವೇರಿಸಿದರು. ಸಿಬ್ಬಂದಿಗಳಾದ ಬಾಬು ರಾಜೂರ, ಅನ್ನಪೂರ್ಣ, ಶಿವಮ್ಮ ಕುಷ್ಟಗಿ, ಬಸವರಾಜ ರೊಟ್ಟಿ, ಸಿದ್ದು ಸೊಲಗಿ ಇದ್ದರು.
ಪಟ್ಟಣದ ಕೆ.ಜಿ.ಎಂ.ಎಸ್ ಶಾಲೆಯಲ್ಲಿ ಶುಕ್ರವಾರ ಸ್ವಾತಂತ್ರ್ಯೋತ್ಸವದ ಅಂಗವಾಗಿ ಎಸ್‌ಡಿಎಂಸಿ ಅಧ್ಯಕ್ಷ ಆನಂದ ಕೊಟಗಿ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಶಿಕ್ಷಕ ಬಿ.ಬಿ. ಕುರಿ, ಎನ್.ಎಲ್. ಚೌಹಾನ್, ಎಂ.ಪಿ. ಅಣಗೌಡರ್, ಎಸ್.ಐ. ಜಗಾಪೂರ, ರೇಣುಕಾ ಹೊಸಳ್ಳಿ, ಜೆ.ಎ. ಪಾಟೀಲ, ಎಂ.ಎಸ್. ಮಾಳಶೆಟ್ಟಿ, ಡಿ.ವಿ ಕಳ್ಳಿ ಇದ್ದರು.
ಶ್ರೀ ಬಸವೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕಿ ಭಾರತಿ ಶಿರ್ಸಿ ಸ್ವಾತಂತ್ರ‍್ಯ ದಿನಾಚರಣೆಯ ಕುರಿತು ಮಾತನಾಡಿದರು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಉಪ ತಹಸೀಲ್ದಾರ ಕಚೇರಿಯಲ್ಲಿ ಉಪ ತಹಸೀಲ್ದಾರ ಶಂಕ್ರಪ್ಪ ದೊಡ್ಡಮನಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತಕ್ಕೆ ಸ್ವಾತಂತ್ರ‍್ಯ ಬಂದು 79 ವರ್ಷಗಳು ಪೂರ್ಣಗೊಂಡಿದ್ದು, ನಮ್ಮ ದೇಶವು ಜಗತ್ತಿನ ಎಲ್ಲ ರಾಷ್ಟ್ರಗಳಿಗಿಂತ ಒಂದು ಹೆಜ್ಜೆ ಮುಂದು ಎಂಬ ರೀತಿಯಲ್ಲಿ ಬೆಳೆಯುತ್ತಿದೆ ಎಂದು ಹೇಳಿದರು. ಗ್ರಾಮ ಆಡಳಿತಾಧಿಕಾರಿ ದಾವಲ ಇಟಗಿ, ಸಂಗಮೇಶ ಕಡಗದ, ಸಂಗಮೇಶ ಮಾದರ, ಸುಧಾ ಕುರಡಗಿ, ಕಳಕಪ್ಪ ತಳವಾರ, ಹನುಮಂತ ತಳವಾರ, ದ್ರಾಕ್ಷಾಯಣಿ ಶಾಂತಗೇರಿ ಸೇರಿದಂತೆ ಸಿಬ್ಬಂದಿ ಇದ್ದರು.