ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಹೀನಾಯ ಸೋಲನ್ನು ಅನುಭವಿಸಿದ ಹಿನ್ನೆಲೆಯಲ್ಲಿ ತಂಡದ ಮೇಲೆ ಗಂಭೀರ ಟೀಕೆಗಳು ವ್ಯಕ್ತವಾಗುತ್ತಿವೆ. ಆಟಗಾರರಿಂದ ಹಿಡಿದು ಮುಖ್ಯ ಕೋಚ್‌ವರೆಗೆ ವಿಮರ್ಶೆಗಳು ಕೇಳಿಬರುತ್ತಿವೆ. ಗುವಾಹಟಿ ಟೆಸ್ಟ್‌ನಲ್ಲಿ ನಾಯಕತ್ವ ವಹಿಸಿದ್ದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಕೂಡ ತಮ್ಮ ವೈಫಲ್ಯಕ್ಕಾಗಿ ಕ್ಷಮೆಯಾಚಿಸಿದ್ದಾರೆ.
ಗುವಾಹಟಿ ಟೆಸ್ಟ್‌ನಲ್ಲಿ ಪಂತ್ ಔಟಾದ ವಿಧಾನಕ್ಕೆ ಸಾಕಷ್ಟು ಟೀಕೆಗಳು ಹರಿದಾಡಿದ್ದವು. ಮುಖ್ಯ ಕೋಚ್ ಗೌತಮ್ ಗಂಭೀರ್ ಕೂಡ “ಪ್ರೇಕ್ಷಕರಿಗಿಂತ ಹೆಚ್ಚಾಗಿ ತಂಡಕ್ಕಾಗಿ ಆಡಬೇಕು” ಎಂದು ಹೇಳಿಕೆ ನೀಡಿದ್ದರು.
ಟೆಸ್ಟ್ ಸರಣಿ ಮುಗಿದ ಬಳಿಕ ಪಂತ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕಳೆದ ಎರಡು ವಾರಗಳಲ್ಲಿ ನಾವು ಉತ್ತಮ ಪ್ರದರ್ಶನ ನೀಡಿಲ್ಲ ಎಂಬುದು ನಿಜ. ತಂಡವಾಗಿ ಮತ್ತು ವ್ಯಕ್ತಿಗಳಾಗಿ ನಾವು ಯಾವಾಗಲೂ ಅತ್ಯುತ್ತಮವಾಗಿ ಆಡಲು ಮತ್ತು ಲಕ್ಷಾಂತರ ಭಾರತೀಯರ ಮುಖದಲ್ಲಿ ನಗು ತರಲು ಬಯಸುತ್ತೇವೆ. ಕ್ಷಮಿಸಿ, ಈ ಬಾರಿ ನಾವು ನಿರೀಕ್ಷೆಗಳಿಗೆ ತಕ್ಕಂತೆ ಆಡಲಿಲ್ಲ.
ಕ್ರೀಡೆಗಳು ಕಲಿಯಲು ಮತ್ತು ಬೆಳೆಯಲು ಸಹಾಯ ಮಾಡುತ್ತವೆ. ಭಾರತವನ್ನು ಪ್ರತಿನಿಧಿಸುವುದು ದೊಡ್ಡ ಗೌರವ. ಮತ್ತೆ ಕಷ್ಟಪಟ್ಟು ಕೆಲಸ ಮಾಡುತ್ತೇವೆ, ಒಗ್ಗೂಡಿ ಬಲವಾಗಿ ಮರಳುತ್ತೇವೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ಜೈ ಹಿಂದ್,” ಎಂದು ಬರೆದುಕೊಂಡಿದ್ದಾರೆ.


