ಭಾರತ-ಪಾಕ್ ಸಂಘರ್ಷ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್..!

0
Spread the love

ಬೆಂಗಳೂರು: ಪಾಕಿಸ್ತಾನದ ವಿಫಲ ದಾಳಿಗಳಿಗೆ ಭಾರತ ಸೂಕ್ತ ಪ್ರತ್ಯುತ್ತರ ನೀಡುತ್ತಿದ್ದು, ಭಾರತೀಯ ವಾಯು ರಕ್ಷಣಾ ವ್ಯವಸ್ಥೆಯು ಪಾಕಿಸ್ತಾನದ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಆಕಾಶದಲ್ಲೇ ನಾಶಪಡಿಸಿದೆ. ಪರಿಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ

Advertisement

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಪಡೆ ಸಿಐಎಸ್ಎಪ್ ಸಿಬ್ಬಂದಿಯಿಂದ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಪಾಕ್ ಗಡಿ ಭಾಗದ ಏರ್​ಪೋರ್ಟ್​ಗೆ ತೆರಳುವ ವಿಮಾನಗಳನ್ನು ರದ್ದು ಮಾಡಲಾಗಿದೆ.

ಈ ಮಧ್ಯೆ ಪ್ರಯಾಣಿಕರು ತಮ್ಮ ವಿಮಾನ‌ ನಿರ್ಗಮನದ ಕನಿಷ್ಠ ಮೂರು ಗಂಟೆಗಳ ಮುನ್ನ ವಿಮಾನ‌ ನಿಲ್ದಾಣಕ್ಕೆ ಆಗಮಿಸುವಂತೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಡಳಿತ ಮಂಡಳಿ ಪ್ರಯಾಣಿಕರಿಗೆ ಸೂಚನೆ ನೀಡಿದೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಡಳಿತ ಮಂಡಳಿ, ದೇಶಾದ್ಯಂತ ಘೋಷಿಸಲಾಗಿರುವ ಭದ್ರತಾ ಎಚ್ಚರಿಕೆಯ ಹಿನ್ನೆಲೆಯಲ್ಲಿ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಭದ್ರತಾ ತಪಾಣೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದೆ.

ಪ್ರಯಾಣಿಕರು ತಮ್ಮ ವಿಮಾನ ನಿರ್ಗಮನದ ಕನಿಷ್ಠ ಮೂರು ಗಂಟೆಗಳ ಮುನ್ನ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೂಲಕ, ಚೆಕ್-ಇನ್, ಭದ್ರತಾ ತಪಾಸಣೆ ಮತ್ತು ಬೋರ್ಡಿಂಗ್ ಪ್ರಕ್ರಿಯೆಯನ್ನು ಸುಗಮವಾಗಿ ಕೈಗೊಳ್ಳಬಹುದು ಎಂದು ಹೇಳಿದೆ.

ಮುಂದುವರೆದು, ಪ್ರಯಾಣಿಕರು ತಾವು ಪ್ರಯಾಣ ಮಾಡಲಿರುವ ವಿಮಾನಗಳ ವೇಳಾಪಟ್ಟಿಗಳ ಕುರಿತು ಆಯಾ ವಿಮಾನಯಾನ ಸಂಸ್ಥೆಗಳ ಜೊತೆಗೆ ಸಂಪರ್ಕಿಸಬೇಕೆಂದು ವಿನಂತಿಸಲಾಗಿದ್ದು, ಸಹಕರಿಸುವಂತೆ ಮನವಿ ಮಾಡಿದೆ.

 


Spread the love

LEAVE A REPLY

Please enter your comment!
Please enter your name here