ಭಾರತ ಪಾಕಿಸ್ತಾನ ಉದ್ವಿಗ್ನತೆ: ರಾಜ್ಯದಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ – ಡಾ.ಜಿ ಪರಮೇಶ್ವರ್

0
Spread the love

ಬೆಂಗಳೂರು: ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮತ್ತಷ್ಟು ಹೆಚ್ಚಿದೆ. ಭಾರತವು ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನದ ಮೇಲೆ ದಾಳಿ ನಡೆಸುತ್ತಿದೆ. ಪಾಕಿಸ್ತಾನವೂ ಕೂಡ ಪ್ರತಿ ದಾಳಿ ನಡೆಸಿದ್ದರೂ ಎಲ್ಲವೂ ವಿಫಲಗೊಂಡಿದೆ. ಸಧ್ಯಕ್ಕೆ ಪಾಕಿಸ್ತಾನ ಹಾಗೂ ಭಾರತದ ನಡುವೆ ಯುದ್ಧ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್​​ ಮಾತನಾಡಿ, ಕಾನೂನು ಸುವ್ಯವಸ್ಥೆಗಿಂತ ಹೆಚ್ಚಾಗಿ, ಯುದ್ಧ ಭೀತಿ ಇದೆ.

Advertisement

ಗಡಿ ಪ್ರದೇಶದಲ್ಲಿ ಆಗುತ್ತಿರುವ ಚಟುವಟಿಕೆಗಳು, ಉಗ್ರರ ವಿರುದ್ಧ ಸೇನಾ ಪಡೆ ಕ್ರಮ ತೆಗೆದುಕೊಂಡಿದೆ. ಈ ಪರಿಸ್ಥಿತಿ ಹೆಚ್ಚಾದರೆ ಯುದ್ದದ ಪರಿಸ್ಥಿತಿ ಬರಬಹುದು ಎಂಬುದನ್ನು ಕೇಂದ್ರ ಸರ್ಕಾರ ಎಲ್ಲ ರಾಜ್ಯ ಸರ್ಕಾರಗಳಿಗೆ ಕೆಲವು ಸೂಚನೆಗಳನ್ನು ನೀಡಿದೆ. ಅದರ ಹಿನ್ನೆಲೆಯಲ್ಲಿ ಈಗಾಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು‌.

ಈ ಸಂಬಂಧ ಮುಖ್ಯಮಂತ್ರಿಗಳು ಇಂದು ಸಂಜೆ 4 ಗಂಟೆಗೆ ಸಭೆ ಕರೆದಿದ್ದಾರೆ. ಗೃಹ ಇಲಾಖೆ, ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸುತ್ತಾರೆ. ನಿನ್ನೆಯಿಂದ ಈಚೆಗೆ ಕೇಂದ್ರ ಸರ್ಕಾರದಿಂದ ಯಾವುದಾದರೂ ಸೂಚನೆಗಳು ಬಂದಿದ್ದರೆ, ಅದರ ಬಗ್ಗೆಯೂ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ಸನ್ನಿವೇಶ ಎದುರಾಗುವ ಮುನ್ನ ಅಗತ್ಯ ತಯಾರಿ ಮಾಡಿಕೊಂಡಿದ್ದೇವೆ. ಆಹಾರ ಧಾನ್ಯ, ನೀರು, ಆಸ್ಪತ್ರೆಗಳನ್ನು ಸಜ್ಜು ಮಾಡಿಕೊಂಡಿದ್ದೇವೆ. ಅಂತಹ ಘಟನೆಗಳು ನಡೆದರೆ ಎದುರಿಸಲು ನಾವು ಸಿದ್ಧವಾಗಿರಬೇಕು ಎಂಬುದನ್ನು ಹೊರತುಪಡಿಸಿದರೆ, ಅಂತಹ ಸನ್ನಿವೇಶ ಇಲ್ಲ ಎಂದು ಸ್ಪಷ್ಟಪಡಿಸಿದರು.

 


Spread the love

LEAVE A REPLY

Please enter your comment!
Please enter your name here