ದುಬೈನ ಕ್ರೀಡಾಂಗಣದಲ್ಲಿ ಇಂದು ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ಗೆದ್ದು ಬೀಗಿದೆ.
Advertisement
ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ ಗಳಲ್ಲಿ 249 ರನ್‌ಗಳಿಗೆ ಆಲೌಟ್ ಆಯಿತು. ಶ್ರೇಯಸ್ ಅಯ್ಯರ್ ಅರ್ಧಶತಕ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರೆ, ಅಕ್ಷರ್ ಪಟೇಲ್ ಮತ್ತು ಹಾರ್ದಿಕ್ ಪಾಂಡ್ಯ ಉತ್ತಮ ಪ್ರದರ್ಶನ ನೀಡುವ ಮೂಲಕ ಸವಾಲಿನ ಮೊತ್ತ ಕಲೆಹಾಕಲು ಕಾರಣವಾದರು.
250 ರನ್‌ಗಳ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 45.3 ಓವರ್ ಗಳಲ್ಲಿ 205 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ವರುಣ್ ಚಕ್ರವರ್ತಿ 10 ಓವರ್ ಗಳಲ್ಲಿ 42 ರನ್ ಬಿಟ್ಟುಕೊಟ್ಟು 5 ವಿಕೆಟ್ ಪಡೆಯುವ ಮೂಲಕ ಮಿಂಚಿದರು. ಕುಲದೀಪ್ ಯಾದವ್ 2 ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ತಲಾ ಒಂದು ವಿಕೆಟ್ ಪಡೆದರು.