ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಟೀಂ ಇಂಡಿಯಾ ಮಹಿಳಾ ಟಿ20 ವಿಶ್ವಕಪ್ 2024 ಟೂರ್ನಿಯಲ್ಲಿ ಇಂದು ಬದ್ಧವೈರಿ ಪಾಕಿಸ್ತಾನ ವಿರುದ್ಧ ಸೆಣಸಲಿದೆ. ಆರಂಭಿಕ ಪಂದ್ಯದಲ್ಲೇ ಹೀನಾಯ ಸೋಲನುಭವಿಸಿದ್ದ ಟೀಂ ಇಂಡಿಯಾಗೆ ಇಂದಿನ ಪಂದ್ಯ ನಿರ್ಣಾಯಕವಾಗಿದೆ.
ದುಬೈನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಹಿಳೆಯರ ಟೀಂ ಇಂಡಿಯಾ, ಫಾತಿಮಾ ಸನಾ ನೇತೃತ್ವದ ಪಾಕಿಸ್ತಾನವನ್ನು ಎದುರಿಸಲಿದೆ. ನ್ಯೂಜಿಲೆಂಡ್ ವಿರುದ್ಧ ಭಾರತ ತಂಡದ ವನಿತೆಯರು ಸೋಲನುಭವಿಸಿದ್ದರು. ನಂತರ ಶ್ರೀಲಂಕಾ ವಿರುದ್ಧ ಜಯ ಗಳಿಸಿತ್ತು.
ಶುಕ್ರವಾರ ಕೀವಿಸ್ ವಿರುದ್ಧ ಭಾರತ ಬೌಲಿಂಗ್ ಹಾಗೂ ಬ್ಯಾಟಿಂಗ್ ವೈಫಲ್ಯದಿಂದ 58 ರನ್‌ಗಳಿಂದ ಸೋಲೊಪ್ಪಿಕೊಂಡಿತು. ತಂಡವು ಈಗ ಕಳಪೆ ನೆಟ್ ರನ್‌ರೇಟ್ ಹೊಂದಿದ್ದು, 5 ತಂಡಗಳಿರುವ ‘ಎ’ ಗುಂಪಿನಲ್ಲಿ ಕೊನೆ ಸ್ಥಾನದಲ್ಲಿದೆ.
ಪಾಕ್ ವಿರುದ್ಧ ಪಂದ್ಯ ಸೇರಿ ಇನ್ನೂ ಒಟ್ಟು 3 ಪಂದ್ಯಗಳನ್ನು ಟೀಂ ಇಂಡಿಯಾ ಆಡಲಿದೆ. ಈ ಎಲ್ಲಾ ಪಂದ್ಯಗಳಲ್ಲೂ ಗೆಲ್ಲುವ ಅಗತ್ಯ ಇದೆ. ಇಂದಿನ ಪಂದ್ಯ ಮಾಡು ಇಲ್ಲವೇ ಮಡಿ ಕದನವಾಗಿದೆ. ಒಂದು ವೇಳೆ ಪಾಕ್ ವಿರುದ್ಧ ಸೋತರೆ ಭಾರತ ಸೆಮಿಫೈನಲ್‌ನಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ.