ಇಂದು ಮಹಿಳಾ ಏಷ್ಯಾಕಪ್ ಟಿ20 ಟೂರ್ನಿಗೆ ಚಾಲನೆ ದೊರೆಯಲಿದೆ. ಶ್ರೀಲಂಕಾದಲ್ಲಿ ನಡೆಯಲಿರುವ ಈ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಯುಎಇ ಮತ್ತು ನೇಪಾಳ ತಂಡಗಳು ಮುಖಾಮುಖಿಯಾಗಲಿದೆ.
Advertisement
ಇನ್ನು ಇದೇ ದಿನ ನಡೆಯಲಿರುವ ಎರಡನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಕಣಕ್ಕಿಳಿಯಲಿದೆ.
ಟಿ20 ಕ್ರಿಕೆಟ್ನಲ್ಲಿ ಭಾರತ ಮತ್ತು ಪಾಕಿಸ್ತಾನ್ ಮಹಿಳಾ ತಂಡಗಳು ಈವರೆಗೆ 11 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡವು 10 ಬಾರಿ ಜಯ ಸಾಧಿಸಿದರೆ, ಪಾಕಿಸ್ತಾನ್ 3 ಬಾರಿ ಗೆಲುವು ದಾಖಲಿಸಿದೆ. ಈ ಅಂಕಿ ಅಂಶಗಳ ಪ್ರಕಾರ, ಪಾಕ್ ವಿರುದ್ಧ ಭಾರತ ಮೇಲುಗೈ ಹೊಂದಿರುವುದು ಸ್ಪಷ್ಟ. ಹೀಗಾಗಿ ಏಷ್ಯಾಕಪ್ನಲ್ಲೂ ಭಾರತ ತಂಡವೇ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ.


