ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯ ನಾಳೆ (ಡಿ.14) ಧರ್ಮಶಾಲಾದ ಹೆಚ್‌ಪಿಸಿಎ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್‌ನಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡುವ ಸಾಧ್ಯತೆ ಇದೆ.
ಮೋಹಾಲಿಯ ಮುಲ್ಲನ್‌ಪುರ್‌ನಲ್ಲಿ ನಡೆದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡ ಹಿನ್ನೆಲೆ, ತಂಡದ ಸಂಯೋಜನೆಯಲ್ಲಿ ಬದಲಾವಣೆ ಅನಿವಾರ್ಯವಾಗಿದೆ. ಕಳೆದ ಎರಡು ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡದ ಶುಭ್‌ಮನ್ ಗಿಲ್ ಅವರನ್ನು ಕೈ ಬಿಟ್ಟು ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡುವ ಸಾಧ್ಯತೆ ಇದೆ.
ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ ಇದ್ದು, ಮೂರನೇ ಕ್ರಮಾಂಕದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಮಾಡುವ ನಿರೀಕ್ಷೆಯಿದೆ. ನಾಲ್ಕನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಸ್ಥಾನ ಪಡೆಯುವ ಸಾಧ್ಯತೆ ಇದ್ದು, ಆಲ್‌ರೌಂಡರ್‌ಗಳಾಗಿ ಶಿವಂ ದುಬೆ ಮತ್ತು ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯಬಹುದು. ವಿಕೆಟ್ ಕೀಪರ್ ಆಗಿ ಜಿತೇಶ್ ಶರ್ಮಾರನ್ನು ಮುಂದುವರೆಸುವ ಸಾಧ್ಯತೆ ಇದೆ.
ಇನ್ನು ಬೌಲಿಂಗ್ ವಿಭಾಗದಲ್ಲಿ ಅಕ್ಷರ್ ಪಟೇಲ್ ಅವರನ್ನು ಕೈ ಬಿಟ್ಟು ಕುಲ್ದೀಪ್ ಯಾದವ್ ಅಥವಾ ಹರ್ಷಿತ್ ರಾಣಾಗೆ ಅವಕಾಶ ನೀಡಬಹುದು. ಅಕ್ಷರ್ ಪಟೇಲ್ ಕಳೆದ ಎರಡು ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಅನುಭವದ ಹಿನ್ನೆಲೆಯಲ್ಲಿ ಕುಲ್ದೀಪ್ ಯಾದವ್‌ಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ. ಉಳಿದಂತೆ ವರುಣ್ ಚಕ್ರವರ್ತಿ, ಜಸ್‌ಪ್ರೀತ್ ಬುಮ್ರಾ ಮತ್ತು ಅರ್ಷದೀಪ್ ಸಿಂಗ್ ತಂಡದ ಬೌಲಿಂಗ್ ದಾಳಿಯನ್ನು ಮುನ್ನಡೆಸಲಿದ್ದಾರೆ.
ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ
- ಅಭಿಷೇಕ್ ಶರ್ಮಾ
- ಸಂಜು ಸ್ಯಾಮ್ಸನ್
- ತಿಲಕ್ ವರ್ಮಾ
- ಸೂರ್ಯಕುಮಾರ್ ಯಾದವ್ (ನಾಯಕ)
- ಜಿತೇಶ್ ಶರ್ಮಾ (ವಿಕೆಟ್ ಕೀಪರ್)
- ಹಾರ್ದಿಕ್ ಪಾಂಡ್ಯ
- ಶಿವಂ ದುಬೆ
- ವರುಣ್ ಚಕ್ರವರ್ತಿ
- ಅರ್ಷ್‌ದೀಪ್ ಸಿಂಗ್
- ಜಸ್ಪ್ರೀತ್ ಬುಮ್ರಾ
- ಕುಲ್ದೀಪ್ ಯಾದವ್.



