ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದಿದೆ. ನಾಯಕ ರಾಹುಲ್ ಟಾಸ್ ಗೆಲ್ಲುವಲ್ಲಿ ಯಶಸ್ವಿ ಆಗಿದ್ದು, ಮೊದಲು ಬೌಲಿಂಗ್ ಆಯ್ಕೆ ಮಾಡಿ ದಕ್ಷಿಣ ಆಫ್ರಿಕಾ ಭಾರತ ತಂಡಕ್ಕೆ ಬ್ಯಾಟಿಂಗ್ ಮಾಡುವಂತೆ ಆಹ್ವಾನಿಸಿದ್ದಾರೆ.
ಸರಣಿ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡದಲ್ಲಿ ಒಂದು ಬದಲಾವಣೆ ನಡೆದಿದೆ. ಮೊದಲೆರಡು ಪಂದ್ಯಗಳಲ್ಲಿ ಸಾಮಾನ್ಯ ಪ್ರದರ್ಶನ ನೀಡಿದ ವಾಷಿಂಗ್ಟನ್ ಸುಂದರ್ರನ್ನು ಪಂದ್ಯದಿಂದ ಕೈಬಿಡಲಾಗಿದ್ದು ಅವರ ಸ್ಥಾನಕ್ಕೆ ತಿಲಕ್ ಬರ್ಮಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಇದೀಗ ದಕ್ಷಿಣ ಆಫ್ರಿಕಾ ತಂಡದಿಂದ ಇಬ್ಬರು ಆಟಗಾರರು ಹೊರಬಿದ್ದಿದ್ದಾರೆ. ನಂದ್ರೆ ಬರ್ಗರ್ ಮತ್ತು ಟೋನಿ ಡಿ ಜಾರ್ಜಿ ಗಾಯದಿಂದಾಗಿ ತಂಡದಿಂದ ಹೊರಬಿದ್ದಿದ್ದಾರೆ. ಇವರ ಸ್ಥಾನಕ್ಕೆ ಒಟ್ನಿಲ್ ಬಾರ್ಟ್ಮಾನ್ ಮತ್ತು ರಯಾನ್ ರಿಕಲ್ಟನ್ ಅವರ ತಂಡ ಸೇರಿಕೊಂಡಿದ್ದಾರೆ.
ಈ ಪಂದ್ಯವು ಸರಣಿ ನಿರ್ಣಾಯಕ. ಏಕೆಂದರೆ ಮೂರು ಮ್ಯಾಚ್ಗಳ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ, ದ್ವಿತೀಯ ಮ್ಯಾಚ್ನಲ್ಲಿ ಸೌತ್ ಆಫ್ರಿಕಾ ತಂಡ ಜಯ ಸಾಧಿಸಿದೆ. ಇದೀಗ ಮೂರನೇ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಅದರಂತೆ ಈ ಪಂದ್ಯದಲ್ಲಿ ಗೆಲ್ಲುವ ತಂಡ ಟ್ರೋಫಿ ಎತ್ತಿ ಹಿಡಿಯಲಿದೆ.
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಕೆಎಲ್ ರಾಹುಲ್ (ನಾಯಕ), ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ.
ಸೌತ್ ಆಫ್ರಿಕಾ ಪ್ಲೇಯಿಂಗ್ XI: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಯಾನ್ ರಿಕೆಲ್ಟನ್, ಐಡೆನ್ ಮಾರ್ಕ್ರಾಮ್ , ಮ್ಯಾಥ್ಯೂ ಬ್ರೀಟ್ಝ್ಕೆ, ಡೆವಾಲ್ಡ್ ಬ್ರೆವಿಸ್, ಮಾರ್ಕೊ ಯಾನ್ಸೆನ್, ಕಾರ್ಬಿನ್ ಬಾಷ್, ಲುಂಗಿ ಎನ್ಗಿಡಿ, ಕೇಶವ್ ಮಹಾರಾಜ್, ಒಟ್ನೀಲ್ ಬಾರ್ಟ್ಮ್ಯಾನ್.



